ಉಡುಪಿ: ಕೂಲಿ ಕಾರ್ಮಿಕನೋರ್ವ ಹೊಳೆನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಚೀರೊಳ್ಳಿ ಎಂಬಲ್ಲಿ ನಡೆದಿದೆ.
ಕೂಲಿ ಕಾರ್ಮಿಕನ್ನು ತುಮಕೂರು ಮೂಲದ ಆನಂದ್ (45) ಎಂದು ಗುರುತಿಸಲಾಗಿದೆ. ಇವರು ಕೆಲಸ ಮಾಡುವ ಮನೆಗೆ ತೆರಳಲು ಸೀತಾನದಿಯ ಉಪನದಿಯನ್ನು ದಾಟಿ ಹೋಗಬೇಕಿತ್ತು. ಹಗ್ಗದ ಸಹಾಯದಿಂದ ಹೊಳೆ ದಾಟುತ್ತಿದ್ದಾಗ ಹಗ್ಗ ತುಂಡಾಗಿ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ ಎನ್ನಲಾಗಿದೆ.
ಇವರು ನಾಡ್ಪಾಲಿನ ಮನೋರಮಾ ಹೆಗ್ಡೆ ಎಂಬವರಿಗೆ ಸೇರಿದ ತೋಟದಲ್ಲಿ ಕಳೆದ ಹಲವಾರು ವರ್ಷಗಳಿಂದ ದುಡಿಯುತ್ತಿದ್ದರು. ತೋಟದ ಮನೆಯಿಂದ ಹೊಳೆ ದಾಟಿ ಬರಲು ಕಾಲುಸೇತುವೆ ಸಹಿತ ಯಾವುದೇ ಮೂಲ ಸೌಕರ್ಯವನ್ನು ಈ ತನಕ ಕಲ್ಪಿಸಲಾಗಿಲ್ಲ. ಹಾಗಾಗಿ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಹೆಬ್ರಿ ಪೊಲೀಸ್ ಸಬ್ ಇನ್ಸ್ ಫೆಕ್ಟರ್ ಮಹೇಶ್ ಟಿಎಂ ಭೇಟಿ ನೀಡಿದ್ದು ಪ್ರಕರಣ ದಾಖಲಿಸಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…