ದಕ್ಷಿಣ ಕನ್ನಡ: ತುಳುಭವನದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಭಾಂಗಣದಲ್ಲಿ, ಅಕಾಡೆಮಿಯ 30ನೇ ವರ್ಷದ ಸಂಭ್ರಮಾಚರಣೆ ಮತ್ತು ಸಭಾಂಗಣ ಉದ್ಘಾಟನೆ ಸಂದರ್ಭದಲ್ಲಿ ಅಧ್ಯಕ್ಷ ಸ್ಥಾನದಿಂದ ಮಾತನಾಡಿದ ತಾರಾನಾಥ ಗಟ್ಟಿ ಕಾಪಿಕಾಡ್ ಇವರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ತುಳು ಭಾಷೆ, ಸಂಸ್ಕೃತಿ ಅಧ್ಯಯನ, ದಾಖಲೀಕರಣ ಮಾಡುವ ಯೋಜನೆ ಹೊಂದಿದೆ.
ತುಳುಭವನವನ್ನು ತುಳುನಾಡಿನ ಸಾಂಸ್ಕೃತಿಕ ಕೇಂದ್ರವನ್ನಾಗಿ ರೂಪಿಸಲಿದ್ದೇವೆ. ಮ್ಯೂಸಿಯಂ ಆರಂಭಿಸಲಿದ್ದೇವೆ’ ಎಂದರು ಸಭಾಂಗಣವನ್ನು ಉದ್ಘಾಟಿಸಿದ ಮಾಜಿ ಸಚಿವ ಬಿ.ರಮಾನಾಥ ರೈ, ‘ಸಮಾಜದಲ್ಲಿ ಸಾಮರಸ್ಯ ತರುವ ಶಕ್ತಿ ತುಳು ಭಾಷೆಗಿದೆ. ಪಂಚದ್ರಾವಿಡ ಭಾಷೆಗಳಲ್ಲೊಂದಾದ ಈ ಭಾಷೆ ಬಗ್ಗೆ ಹೆಮ್ಮೆ ಪಡಬೇಕೇ ಹೊರತು, ಕೀಳರಿಮೆ ಸಲ್ಲದು. ತುಳು ಸಾಹಿತ್ಯದ ಏಳಿಗೆಗಾಗಿ ದುಡಿದ ಅಮೃತ ಸೋಮೇಶ್ವರ ಅವರ ಹೆಸರನ್ನು ಈ ಸಭಾಂಗಣಕ್ಕೆ ಇಟ್ಟಿರುವ ಅಕಾಡೆಮಿಯು ಅವರ ಹೆಸರನ್ನು ಜನ ಸ್ಮರಿಸುವಂತೆ ಮಾಡಿದೆ’ ಎಂದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಜೋಕಿಂ ಸ್ವ್ಯಾನಿ ಅಲ್ವಾರಿಸ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಅಕಾಡೆಮಿಯ ಮಾಜಿ ಅಧ್ಯಕ್ಷ ಎ.ಸಿ. ಭಂಡಾರಿ, ತುಳು ಸಾಹಿತಿ ಇಂದಿರಾ ಹೆಗ್ಗಡೆ, ಪ್ರಮುಖರಾದ ಎಚ್.ಎಂ. ವಾಟ್ಸನ್, ಎಂ.ದೇವದಾಸ್, ಅಕಾಡೆಮಿಯ ರಿಜಿಸ್ಟ್ರಾರ್ ಪೂರ್ಣಿಮಾ ಭಾಗವಹಿದ್ದರು.
ದುರ್ಗಾ ಪ್ರಸಾದ್ ಕುಂಬ್ರ ನಿರೂಪಿಸಿದರು. ಉದ್ಯಾವರ ನಾಗೇಶ ಕುಮಾರ್ ಸ್ವಾಗತಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…