ಜನ ಮನದ ನಾಡಿ ಮಿಡಿತ

Advertisement

ಕೊನೆರಬೆಟ್ಟು : ಭಾರೀ ಗಾಳಿಗೆ ವಿದ್ಯುತ್‌ಕಂಬ ಗದ್ದೆಗೆ; ದೈವಗಳ ಕಾರಣಿಕದಿಂದ ತಪ್ಪಿದ ಅಪಾಯ

ದೈವಗಳ ಕಾರಣಿಕದಿಂದ ಸಂಭವಿಸಬಹುದಾದ ಬಹು ದೊಡ್ಡ ಅಪಾಯ ತಪ್ಪಿ ಹೋದ ಘಟನೆ ಸಿದ್ದಕಟ್ಟೆ ಸಮೀಪದ ಕೊನೆರಬೆಟ್ಟುನಲ್ಲಿ ನಡೆದಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಿದ್ದಕಟ್ಟೆ ಬಂಟರ ಸಂಘದ ವತಿಯಿಂದ ಕೆಸರುಗದ್ದೆ ಕ್ರೀಡಾ ಕೂಟ ಆಯೋಜಿಸುತ್ತಿದ್ದು , ಪ್ರತೀ ವರ್ಷ ದಂತೆ ಕೆಸರು ಗದ್ದೆ ಕೂಟದ ಮೊದಲು ಕೊನೆರಬೆಟ್ಟು ಸ್ಥಳ ದೈವಗಳಿಗೆ ಪರ್ವ ನಡೆಸಿ ಪ್ರಾರ್ಥನೆ ಮಾಡುವುದು ವಾಡಿಕೆ. ಈ ಬಾರಿಯೂ ರವಿವಾರ ಕೆಸರು ಗದ್ದೆ ಕೂಟದ ಮೊದಲು ಪ್ರಾರ್ಥನೆ ಸಲ್ಲಿಸಲಾಗಿತ್ತು.ಕ್ರೀಡಾಕೂಟ ನಡೆಯುವ ಗದ್ದೆಯ ಮೇಲ್ಭಾಗದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿ ಹಾದು ಹೋಗಿತ್ತು.ಇದನ್ನು ಕಂಡ ಆಯೋಜಕರು ಕ್ರೀಡಾಕೂಟದಲ್ಲಿ ವಾಲಿಬಾಲ್ ಮೊದಲಾದ ಪಂದ್ಯಾಟಗಳಿರುವ ಕಾರಣ ಕ್ರೀಡಾ ಕೂಟ ನಡೆಸುವ ದಿನ ಈ ಲೈನ್ ಸ್ಥಗಿತಗೊಳಿಸುವಂತೆ ಮೆಸ್ಕಾಂ ಇಲಾಖೆಗೆ ಮನವಿ ಮಾಡಿ ಲೈನ್ ಕಟ್ ಮಾಡಿಸಿದ್ದರು.ವಿಚಿತ್ರವೆಂದರೆ ರವಿವಾರ ಕ್ರೀಡಾ ಕೂಟ ನಡೆಯುವಾಗ ಭಾರೀ ಗಾಳಿ ಬೀಸಿ ವಿದ್ಯುತ್ ಕಂಬ ತುಂಡಾಗಿ ತಂತಿ ಸಹಿತ ಗದ್ದೆಗೆ ಬಿದ್ದಿದೆ. ಗದ್ದೆಯಲ್ಲಿ ಮಕ್ಕಳ ಸಹಿತ ಸುಮಾರು ಐನೂರರಷ್ಟು ಜನ ಸೇರಿದ್ದರು.

 

ಆದರೆ ಮೊದಲೇ ಲೈನ್ ಕಟ್ ಮಾಡಿದ್ದುದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಆಯೋಜಕರಿಗೆ ಜಾಗದ ದೈವ ಗಳು ಮೊದಲೇ ಸೂಚನೆ ನೀಡಿದ್ದಿರಬಹುದು. ತುಳುನಾಡಿನ ದೈವದ ಕಾರಣಿಕ ಇರುವುದಕ್ಕೆ ಇದು ಸ್ಪಷ್ಟ ನಿದರ್ಶನವೆಂದು ಆಯೋಜಕರು ತಿಳಿಸಿದ್ದಾರೆ. ಈ ಘಟನೆ ಇದೀಗ ಸಾಕಷ್ಟು ವೈರಲ್ ಆಗಿದೆ

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!