ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ವಿದ್ಯುತ್ ಕಂಬವೊಂದು ಉರುಳಿಬಿದ್ದಿದೆ. ಈ ಘಟನೆಯಿಂದ ಯಾರಿಗೂ ಪ್ರಾಣಹಾನಿ ಆಗಿಲ್ಲ. ಆದರೆ ದಿಢೀರನೆ ನಡೆದ ಘಟನೆಯಿಂದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚರಿಸುವ ವಾಹನಗಳಿಗೆ ಅಡಚಣೆ ಉಂಟಾದವು.

ಈಗಾಗಲೇ ಬಿ.ಸಿ.ರೋಡ್ ನ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಸುತ್ತಲೂ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರ ಸಂದರ್ಭ ಸವಾರರಿಗೆ ಚಾಲಕರಿಗೆ ಗೊಂದಲಗಳು ಉಂಟಾಗುತ್ತಿದ್ದು, ರಾತ್ರಿ ವೇಳೇ ಈ ಘಟನೆ ನಡೆದ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು.










