ಕರಾವಳಿ

ನೀರುಪಾಲಾಗಿದ್ದ ವೃದ್ಧೆಯ ಶವಕ್ಕೆ ಹೆಗಲು ಕೊಟ್ಟ ಮಂಗಳೂರಿನ ಪತ್ರಕರ್ತರು!

 

ಶಿರೂರು ಗುಡ್ಡ ಕುಸಿತ ಪ್ರಕರಣ

ಶಿರೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನೀರುಪಾಲಾಗಿದ್ದ ಉಳವರೆ ಗ್ರಾಮದ ನಿವಾಸಿ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ ಮಂಗಳವಾರ ಬೆಳಗ್ಗೆ ಗಂಗಾವಳಿ ನದಿಯ ತೀರದಲ್ಲಿ ಪತ್ತೆಯಾಗಿದ್ದು, ಪೋಸ್ಟ್ ಮಾರ್ಟಂ ನಡೆಸಿದ ಬಳಿಕ ಕುಟುಂಬಿಕರಿಗೆ ಹಸ್ತಾಂತರ ಮಾಡಲಾಯಿತು.
ದುರಂತದಲ್ಲಿ ಉಳವರೆ ಗ್ರಾಮದ 6 ಮನೆಗಳು ಸಂಪೂರ್ಣ ನಾಮಾವಶೇಷವಾಗಿದೆ. 18ರಷ್ಟು ಮನೆಗಳು ಭಾಗಶ: ಹಾನಿಗೊಳಗಾಗಿದೆ.
ಬೇಸರದ ಸಂಗತಿ ಎಂದರೆ ಮೃತದೇಹವನ್ನು ಕುಟುಂಬಿಕರಿಗೆ ಹಸ್ತಾಂತರ ಮಾಡುವ ಸಂದರ್ಭದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು, ಕಂದಾಯ ಇಲಾಖೆ, ಸ್ಥಳೀಯ ಆಡಳಿತ, ಶಾಸಕರು ಹೀಗೆ ಯಾರೆಂದರೆ ಯಾರೂ ಇರಲಿಲ್ಲ. ಗ್ರಾಮದ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ ಮಹಿಳೆಯರು ಗಂಜಿ ಕೇಂದ್ರದಲ್ಲಿದ್ದಾರೆ.

ಹೊರುವವರಿಲ್ಲದೆ ರಸ್ತೆಯೂ ಸರಿಯಿಲ್ಲದೇ ವೃದ್ಧೆಯ ಶವ ಆಂಬುಲೆನ್ಸ್ ನಲ್ಲಿ ಉಳಿದಿದ್ದು ಕೊಳೆತ ವಾಸನೆಯಿಂದಾಗಿ ಯಾರೂ ಹೊರಲು ಸಿದ್ಧರಿರಲಿಲ್ಲ. ಈ ವೇಳೆ ಸ್ಥಳದಲ್ಲಿದ್ದ ಮಂಗಳೂರಿನ ಪತ್ರಕರ್ತರು ಮೃತದೇಹವನ್ನು ತಾವೇ ಹೊತ್ತುಕೊಂಡು ಸಾಗಿ ಮನೆಯವರಿಗೆ ಒಪ್ಪಿಸಿ ಮುಂದಿನ ಅಂತಿಮ ಸಂಸ್ಕಾರ ನಡೆಸಲು ನೆರವಾಗಿ ಮಾನವೀಯತೆ ಮೆರೆದಿದ್ದಾರೆ. ನಿರಾಶ್ರಿತರು ಮತ್ತು ಘಟನೆಯಲ್ಲಿ ಸಂತ್ರಸ್ತರಾದವರಿಗೆ ಸಾಂತ್ವನ ನೀಡಲು ಮಂಗಳೂರಿನಿಂದ ತೆರಳಿದ್ದ ಪತ್ರಕರ್ತರ ಚಾರಣ ತಂಡದ ಸದಸ್ಯರಾದ ಮೋಹನ್ ಕುತ್ತಾರ್, ಶಶಿ ಬೆಳ್ಳಾಯರು, ಆರಿಫ್ ಯುಆರ್ ಕಲ್ಕಟ್ಟ, ಗಿರೀಶ್ ಮಳಲಿ, ಶಿವಶಂಕರ್ ಅವರು ಶವಸಂಸ್ಕಾರದಲ್ಲಿ ಸಹಕರಿಸಿದರು.

ಟ್ಯಾಂಕರ್ ಸ್ಫೋಟವೇ ಘಟನೆಗೆ ಕಾರಣ!

ಶಿರೂರು ಗುಡ್ಡ ಕುಸಿತ ಉಂಟಾದಾಗ ಹೆದ್ದಾರಿಯಲ್ಲಿದ್ದ ಗ್ಯಾಸ್ ಟ್ಯಾಂಕರ್ ನೀರಿಗೆ ಬಿದ್ದು ಭಾರೀ ಸದ್ದಿನೊಂದಿಗೆ ಸ್ಫೋಟ ಸಂಭವಿಸಿತ್ತು. ಇದರಿಂದಲೇ ಉಳವರೆ ಗ್ರಾಮ ನಾಶಗೊಂಡು ಹಲವರು ಪ್ರಾಣ ಕಳೆದುಕೊಳ್ಳುವಂತಾಯ್ತು ಎನ್ನುವ ಅಭಿಪ್ರಾಯ ಸ್ಥಳೀಯರಿಂದ ವ್ಯಕ್ತವಾಗಿದೆ. ನೀರು‌ ಚಿಮ್ಮುತ್ತಿದ್ದಂತೆ ಬಾಂಬ್‌ನಂತೆ ಸ್ಫೋಟದ ಸದ್ದು ಕೇಳಿದ್ದಾಗಿ ಸ್ಥಳೀಯರು ಮಾಹಿತಿ ನೀಡಿರುವುದರಿಂದ ಈ ಸಂಶಯ ಬಲವಾಗಿದೆ. ಈ ನಡುವೆ ಕೇರಳ ಟ್ಯಾಂಕರ್ ಡ್ರೈವರ್ ಅರ್ಜುನನಿಗಾಗಿ‌ ಶೋಧ ಮುಂದುವರಿದಿದೆ.

 

 

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…

8 hours ago

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

3 days ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

3 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

4 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

6 days ago