ಶಿರೂರು ಗುಡ್ಡ ಕುಸಿತ ಪ್ರಕರಣ
ಶಿರೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನೀರುಪಾಲಾಗಿದ್ದ ಉಳವರೆ ಗ್ರಾಮದ ನಿವಾಸಿ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ ಮಂಗಳವಾರ ಬೆಳಗ್ಗೆ ಗಂಗಾವಳಿ ನದಿಯ ತೀರದಲ್ಲಿ ಪತ್ತೆಯಾಗಿದ್ದು, ಪೋಸ್ಟ್ ಮಾರ್ಟಂ ನಡೆಸಿದ ಬಳಿಕ ಕುಟುಂಬಿಕರಿಗೆ ಹಸ್ತಾಂತರ ಮಾಡಲಾಯಿತು.
ದುರಂತದಲ್ಲಿ ಉಳವರೆ ಗ್ರಾಮದ 6 ಮನೆಗಳು ಸಂಪೂರ್ಣ ನಾಮಾವಶೇಷವಾಗಿದೆ. 18ರಷ್ಟು ಮನೆಗಳು ಭಾಗಶ: ಹಾನಿಗೊಳಗಾಗಿದೆ.
ಬೇಸರದ ಸಂಗತಿ ಎಂದರೆ ಮೃತದೇಹವನ್ನು ಕುಟುಂಬಿಕರಿಗೆ ಹಸ್ತಾಂತರ ಮಾಡುವ ಸಂದರ್ಭದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು, ಕಂದಾಯ ಇಲಾಖೆ, ಸ್ಥಳೀಯ ಆಡಳಿತ, ಶಾಸಕರು ಹೀಗೆ ಯಾರೆಂದರೆ ಯಾರೂ ಇರಲಿಲ್ಲ. ಗ್ರಾಮದ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ ಮಹಿಳೆಯರು ಗಂಜಿ ಕೇಂದ್ರದಲ್ಲಿದ್ದಾರೆ.
ಹೊರುವವರಿಲ್ಲದೆ ರಸ್ತೆಯೂ ಸರಿಯಿಲ್ಲದೇ ವೃದ್ಧೆಯ ಶವ ಆಂಬುಲೆನ್ಸ್ ನಲ್ಲಿ ಉಳಿದಿದ್ದು ಕೊಳೆತ ವಾಸನೆಯಿಂದಾಗಿ ಯಾರೂ ಹೊರಲು ಸಿದ್ಧರಿರಲಿಲ್ಲ. ಈ ವೇಳೆ ಸ್ಥಳದಲ್ಲಿದ್ದ ಮಂಗಳೂರಿನ ಪತ್ರಕರ್ತರು ಮೃತದೇಹವನ್ನು ತಾವೇ ಹೊತ್ತುಕೊಂಡು ಸಾಗಿ ಮನೆಯವರಿಗೆ ಒಪ್ಪಿಸಿ ಮುಂದಿನ ಅಂತಿಮ ಸಂಸ್ಕಾರ ನಡೆಸಲು ನೆರವಾಗಿ ಮಾನವೀಯತೆ ಮೆರೆದಿದ್ದಾರೆ. ನಿರಾಶ್ರಿತರು ಮತ್ತು ಘಟನೆಯಲ್ಲಿ ಸಂತ್ರಸ್ತರಾದವರಿಗೆ ಸಾಂತ್ವನ ನೀಡಲು ಮಂಗಳೂರಿನಿಂದ ತೆರಳಿದ್ದ ಪತ್ರಕರ್ತರ ಚಾರಣ ತಂಡದ ಸದಸ್ಯರಾದ ಮೋಹನ್ ಕುತ್ತಾರ್, ಶಶಿ ಬೆಳ್ಳಾಯರು, ಆರಿಫ್ ಯುಆರ್ ಕಲ್ಕಟ್ಟ, ಗಿರೀಶ್ ಮಳಲಿ, ಶಿವಶಂಕರ್ ಅವರು ಶವಸಂಸ್ಕಾರದಲ್ಲಿ ಸಹಕರಿಸಿದರು.
ಟ್ಯಾಂಕರ್ ಸ್ಫೋಟವೇ ಘಟನೆಗೆ ಕಾರಣ!
ಶಿರೂರು ಗುಡ್ಡ ಕುಸಿತ ಉಂಟಾದಾಗ ಹೆದ್ದಾರಿಯಲ್ಲಿದ್ದ ಗ್ಯಾಸ್ ಟ್ಯಾಂಕರ್ ನೀರಿಗೆ ಬಿದ್ದು ಭಾರೀ ಸದ್ದಿನೊಂದಿಗೆ ಸ್ಫೋಟ ಸಂಭವಿಸಿತ್ತು. ಇದರಿಂದಲೇ ಉಳವರೆ ಗ್ರಾಮ ನಾಶಗೊಂಡು ಹಲವರು ಪ್ರಾಣ ಕಳೆದುಕೊಳ್ಳುವಂತಾಯ್ತು ಎನ್ನುವ ಅಭಿಪ್ರಾಯ ಸ್ಥಳೀಯರಿಂದ ವ್ಯಕ್ತವಾಗಿದೆ. ನೀರು ಚಿಮ್ಮುತ್ತಿದ್ದಂತೆ ಬಾಂಬ್‌ನಂತೆ ಸ್ಫೋಟದ ಸದ್ದು ಕೇಳಿದ್ದಾಗಿ ಸ್ಥಳೀಯರು ಮಾಹಿತಿ ನೀಡಿರುವುದರಿಂದ ಈ ಸಂಶಯ ಬಲವಾಗಿದೆ. ಈ ನಡುವೆ ಕೇರಳ ಟ್ಯಾಂಕರ್ ಡ್ರೈವರ್ ಅರ್ಜುನನಿಗಾಗಿ ಶೋಧ ಮುಂದುವರಿದಿದೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…