ಪುತ್ತೂರು: ನೆಹರುನಗರ ಮಂಜಲ್ಪಡ್ಡು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು ಟ್ಯಾಂಕರ್ ಮತ್ತು ತ್ರಿವೀಲ್ಡರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮಂಗಳೂರು ಕಡೆ ಹೋಗುತ್ತಿದ್ದ ಟ್ಯಾಂಕರ್ ವೊಂದು ವಿಕಲಚೇತನ ಶಿವರಾಮ ಅವರು ಚಲಾಯಿಸುತ್ತಿದ್ದ ತ್ರಿವೀಲ್ಡರ್ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಸವಾರ ಮೃತ ಪಟ್ಟಿದ್ದಾರೆಂದು ತಿಳಿದು ಬಂದಿದೆ.
ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಅರ್ದ ಗಂಟೆ ಕಳೆದು ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಆ ಬಳಿಕವೇ ಮೃತದೇಹ ಬದಿಗೆ ಸರಿಸಲಾಯಿತು. ಅಷ್ಟರವರೆಗೂ ಮೃತದೇಹ ಅಪಘಾತ ನಡೆದ ಸ್ಥಳದಲ್ಲೇ ಇತ್ತು. ವಾಹನ ಸಂಚಾರಕ್ಕೆ ತೊಡಕಾಗಿತ್ತು.
ಪುತ್ತೂರಿನ ಸಂಚಾರಿ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಕೇಸು ದಾಖಲಿಸಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…