ಮಂಗಳೂರು: ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ತಡೆಗೋಡೆಗಳು ಕುಸಿದು ಬಿದ್ದು ಜೀವಹಾನಿಗಳು ಸಂಭವಿಸುತ್ತಿದೆ ಆದರೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಂಪೂರ್ಣ ವಿಫಲವಾಗಿದೆ.
ಅದರ ಮುಂದುವರಿದ ಭಾಗವಾಗಿ ನಿನ್ನೆ ತಡರಾತ್ರಿ ಜೋಕಟ್ಟೆಯಲ್ಲಿ ಮನೆಯ ಮೇಲೆ ತಡೆಗೋಡೆ ಬಿದ್ದು ಅಪ್ರಾಪ್ತ ದಲಿತ ಬಾಲಕನೋರ್ವ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಹೇಳಿದ್ದಾರೆ.
ಕೆಲವು ದಿನಗಳ ಹಿಂದೆ ಉಳ್ಳಾಲ ತಾಲೂಕಿನ ಕುತ್ತಾರು ಸಮೀಪ ತಡೆಗೋಡೆ ಬಿದ್ದು ಒಂದೇ ಕುಟುಂಬದ ನಾಲ್ಕು ಸದಸ್ಯರು ಮೃತಪಟ್ಟ ಬಳಿಕವೂ ಜಿಲ್ಲಾಡಳಿತ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ವಿಫಲವಾಗಿದೆ.ಅದರ ನಂತರ ಅನೇಕ ಕಡೆ ತಡೆಗೋಡೆ ಕುಸಿದಿದೆ,ನಿನ್ನೆ ತಡರಾತ್ರಿ ಜೋಕಟ್ಟೆಯಲ್ಲಿ ತಡೆಗೋಡೆ ಕುಸಿದು ಒಬ್ಬನ ಜೀವಹಾನಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.ಮಳೆ ಬರುವ ಮುನ್ಸೂಚನೆ ಇರುವಾಗ ಕೇವಲ ಶಾಲೆಗೆ ರಜೆ ಕೊಟ್ಟ ಮಾತ್ರಕ್ಕೆ ಜಿಲ್ಲಾಡಳಿತದ ಕೆಲಸ ಮುಗಿಯುವುದಿಲ್ಲ,ಇಂತಹ ಅಪಾಯಕಾರಿ ತಡೆಗೋಡೆ,ಬರೆ ಜರಿತ ಸಾಧ್ಯ ಇರುವ ಬೆಟ್ಟ ಗುಡ್ಡ ಪ್ರದೇಶಗಳನ್ನು ಗುರುತಿಸಿ ಅಲ್ಲಿಂದ ಜನರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡುವಂತಹ ಹಾಗೂ ಅವರಿಗೆ ಸೂಕ್ತ ವ್ಯವಸ್ಥೆಗಳನ್ನು ಮಾಡುವ ಕೆಲಸ ಮಾಡಬೇಕು. ಅದೇ ರೀತಿ ಇಂತಹ ಅಪಾಯಕಾರಿ ಪ್ರದೇಶ ಎಲ್ಲೆಲ್ಲಾ ಇವೆ ಎಂದು ಜಿಲ್ಲೆಯ ಎಲ್ಲಾ ಸ್ಥಳೀಯಾಡಳಿತ ಗಳಿಗೆ ಅಥವಾ ಇದಕ್ಕೆಂದೇ ಜಿಲ್ಲಾಡಳಿತದಿಂದ ನೇಮಿಸಲ್ಪಟ್ಟ ವಿಶೇಷ ತಂಡಗಳಿಗೆ ನಿರ್ದೇಶನ ನೀಡಿ ಪತ್ತೆ ಹಚ್ಚಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಹಾಗೂ ಜೋಕಟ್ಟೆಯಲ್ಲಿ ತಡೆಗೋಡೆ ಕುಸಿತದಿಂದ ಮೃತಪಟ್ಟ ಬಾಲಕ ದಲಿತ ಸಮುದಾಯಕ್ಕೆ ಸೇರಿದ ಬಡ ಕುಟುಂಬವಾಗಿದೆ, ಕುಟುಂಬಕ್ಕೆ ಹಾಗೂ ಗಾಯಗೊಂಡವರಿಗೆ ಗರಿಷ್ಟ ಪರಿಹಾರವನ್ನು ಸರಕಾರ ಒದಗಿಸಬೇಕು ಮತ್ತು ತಡೆಗೋಡೆ ಕುಸಿತದಿಂದ ಮನೆ ಭಾಗಶಃ ಹಾನಿಯಾಗಿರುವುದರಿಂದ ಪುನರ್ವಸತಿ ಕಲ್ಪಿಸಬೇಕೆಂದು ಜಮಾಲ್ ಜೋಕಟ್ಟೆ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…