ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಇವರನ್ನು ಶ್ರೀ ಸಿದ್ದರಾಮೇಶ್ವರ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ವಿಶ್ವಕನ್ನಡ ಕಲಾ ಸಂಸ್ಥೆ ಮತ್ತು ವಿಶ್ವ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ.ರವೀಶ್ (ಅಕ್ಕರ) ಅವರು ತಿಳಿಸಿರುತ್ತಾರೆ. ಶಿಕ್ಷಣ ಕ್ಷೇತ್ರ, ಶಿಕ್ಷಕ ಸಂಘಟನಾ ಕ್ಷೇತ್ರ ಮತ್ತು ಸಾಹಿತ್ಯ ಸಂಘಟನಾ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ.
ಅಗಸ್ಟ್ 17ರಂದು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೆರೆಯಲ್ಲಿ ನಡೆಯುವ ರಾಜ್ಯ ಮಟ್ಟದ 5ನೇ ವಿಶ್ವ ಕನ್ನಡ ಸಾಹಿತ್ಯ ಮತ್ತು ಪರಿಸರ ಜಾಗೃತಿ ಸಮ್ಮೇಳನದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಅವರು ತಿಳಿಸಿರುತ್ತಾರೆ.
ಎಂ. ಎ. ಬಿ. ಎಡ್. ಪದವೀಧರರಾದ ಡಾ.ರಾಮಕೃಷ್ಣ ಶಿರೂರು ಹಿಂದಿ ಭಾಷೆಯಲ್ಲಿ ರಾಜ ಭಾಷಾ ವಿದ್ವಾನ್ ಪದವಿಯನ್ನು ಪಡೆದಿರುತ್ತಾರೆ. ಇವರು ಮೂಲತ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಮೇಲ್ಪಂಗ್ತಿಯ ಶಾನುಭೋಗರ ಮನೆತನಕ್ಕೆ ಸೇರಿದ ಶ್ರೀ ಭವಾನಿ ಶಂಕರ ಶಾನುಭೋಗ ಮತ್ತು ಶ್ರೀಮತಿ ಸರೋಜಿನಿ ಶಾನುಭೋಗ ಅವರ ಪುತ್ರ. 1994ರಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಪದವಿ ಪೂರ್ವ ಕಾಲೇಜಿನಲ್ಲಿ ಒಂದು ವರ್ಷ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿ,
19 95 ರಿಂದ ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯಲ್ಲಿ ಕನ್ನಡ ಆಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಾ ಬಂದಿದ್ದಾರೆ.
ಸಾಹಿತ್ಯ, ಸಂಗೀತ, ಸಾಂಸ್ಕೃತಿಕ ಮತ್ತು ಶಿಕ್ಷಕ ಸಂಘಟನಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡ ಇವರಿಂದ ಮೂಡುಬಿದಿರೆಯಲ್ಲಿ ಇನ್ನಷ್ಟು ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ಮುಂದುವರೆಯಲಿ ಎಂದು ವಿಶ್ವ ಕನ್ನಡ ಕಲಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ.ರವೀಶ್ ಈ. ಅವರು ರಾಮಕೃಷ್ಣ ಶಿರೂರು ಅವರಿಗೆ ಅಭಿನಂದನೆ ಸಲ್ಲಿಸಿರುತ್ತಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…