ಕರ್ನಾಟಕ ರಾಜ್ಯದಲ್ಲಿ ಅತ್ಯಂತ ಶೋಚನೀಯ ರೀತಿಯಲ್ಲಿ ಜೀವನ ಸಾಗಿರುತ್ತಿರುವ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರು ವಸತಿ, ನಿವೇಶನ, ಮಕ್ಕಳಿಗೆ ಶಿಕ್ಷಣ ಮುಂತಾದ ಎಲ್ಲಾ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಅಲೆವೂರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ಗೌರವಾಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದರು.
ಉಡುಪಿಯ ಪ್ರವಾಸಿ ಮಂದಿರದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಜನಾಂಗದ ಮಕ್ಕಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಬಹಳಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಒಂದು ಕಡೆ ರಾಜ್ಯದ ಕೆಲವು ತಾಲೂಕಿನ ತಹಶೀಲ್ದಾರರು ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರಿಗೆ ಜಾತಿ ಪ್ರಮಾಣ ಪತ್ರ ನೀಡಲು ಆಗುವುದಿಲ್ಲ ಎನ್ನುತ್ತಾರೆ. ಇನ್ನೊಂದು ಕಡೆ ಈ ಜನಾಂಗದ ವಿದ್ಯಾರ್ಥಿಗಳ ಪ್ರವೇಶಾತಿ ಸಂದರ್ಭದಲ್ಲಿ ಮೊರಾರ್ಜಿ ವಸತಿ ಶಾಲೆಯ ಪ್ರಾಚಾರ್ಯರು ಅಲೆಮಾರಿ ಜನಾಂಗ ಎಂದು ನಮೂದಿಸಿರುವ ಜಾತಿ ಪ್ರಮಾಣ ಪತ್ರವನ್ನೇ ತರಬೇಕೆಂದು ದಾಖಲಾತಿಯನ್ನು ನಿರಾಕರಣೆ ಮಾಡುತ್ತಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಒಕ್ಕೂಟದ ರಾಜ್ಯಾಧ್ಯಕ್ಷ ಪ್ರಕಾಶ್ ಎಂ.ಬೆಂಗಳೂರು, ಉಪಾಧ್ಯಕ್ಷರುಗಳಾದ ಅನಂತ ಕೃಷ್ಣ ಯಾದವ್, ಶಿವರಾಮ ರಘು ಬಳೇಗಾರ್, ಎಚ್.ಇ.ತೋಟಪ್ಪ ಶಿವಮೊಗ್ಗ, ಯುವ ಘಟಕದ ರಾಜ್ಯಾಧ್ಯಕ್ಷ ವೈ.ಕುಮಾರ್ ಮೈಸೂರು, ಉಡುಪಿ ಜಿಲ್ಲಾಧ್ಯಕ್ಷ ಕೃಷ್ಣಯ್ಯ ಜೋಗಿ, ಮಹಿಳಾ ಘಟಕದ ಅಧ್ಯಕ್ಷೆ ಅನುಪಮಾ ಜೋಗಿ, ಯುವ ಘಟಕದ ಜಿಲ್ಲಾಧ್ಯಕ್ಷ ರಾಜೇಶ್, ಜಿಲ್ಲಾ ಪ್ರಧಾನ ಸಂಚಾಲಕ ಕೇಶವ ಕೋಟೇಶ್ವರ, ಗೌರವಾಧ್ಯಕ್ಷ ಪುಟ್ಟಣ್ಣ ಯಾದವ್ ಉಪಸ್ಥಿತರಿದ್ದರು
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…