ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಫಾ.ವಲೇರಿಯನ್ ಡಿ.ಸೋಜ ಅವರು ಮಾತನಾಡಿ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಸರಕಾರದ ಕೆಲಸ ದೇವರ ಕೆಲಸ ಎಂಬ ಮನಸ್ಸಿನಿಂದ ಮಾಡಿದಾಗ ಸರಕಾರದ ಎಲ್ಲಾ ಸವಲತ್ತುಗಳು ಫಲಾನುಭವಿಗಳಿಗೆ ಸಿಗಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ.ಸೋಜ ಅವರನ್ನು ಸನ್ಮಾನಿಸಿದರು.
ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾತನಾಡಿ, ಯಡಿಯೂರಪ್ಪ ಅವರು ಮುಖ್ಯ ಮಂತ್ರಿಯಾಗಿದ್ದ ಸಂಧರ್ಬದಲ್ಲಿ ನನ್ನ ಶಾಸಕತ್ವದ ಅವಧಿಯಲ್ಲಿ ಕ್ಷೇತ್ರದ ಚರ್ಚ್ ಗಳ ಅಭಿವೃದ್ಧಿಗೆ ಅನುದಾನವನ್ನು ಒದಗಿಸಿದ್ದೇನೆ, ಈ ಬಾರಿಯೂ ಬಜೆಟ್ ನಲ್ಲಿ ಸರಕಾರ ಅನುದಾನವನ್ನು ಘೋಷಣೆ ಮಾಡಿದೆ,ಅದರ ಸಂಪೂರ್ಣ ಬಳಕೆ ಮಾಡಿಕೊಳ್ಳಿ ಎಂದು ತಿಳಿಸಿದರು.
ಸರಕಾರದ ವಿವಿಧ ಯೋಜನೆಗಳ ಮಾಹಿತಿ ಪಡೆದು ಪ್ರತಿಯೊಬ್ಬರು ಲಾಭ ಪಡೆಯಬೇಕು ಎಂದು ಮನವಿ ಮಾಡಿದರು.
ಸನ್ಮಾನ ಸ್ವೀಕರಿಸಿ ಬಳಿಕ ಸಭೆಯಲ್ಲಿ ಮಾತನಾಡಿದ ಐವನ್ ಡಿ.ಸೋಜ ಅವರು, ಜನಸಾಮಾನ್ಯರ ನಡುವಿನ ಬಾಂಧವ್ಯವನ್ನು ವೃದ್ದಿಸಿ, ಜವಾಬ್ದಾರಿಯಿಂದ ಜನರ ನಡುವೆ ಇದ್ದು,ಜನಸಾಮಾನ್ಯರ ಬದುಕಿಗೆ ಪೂರಕವಾದ ವಾತಾವರಣ ನಿರ್ಮಿಸಿ, ಸಮಸ್ಯೆ ಗಳನ್ನು ಪರಿಹಾರ ಮಾಡುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಕರ್ತವ್ಯ ನಿರ್ವಹಿಸಬೇಕಿದೆ ಎಂದು ತಿಳಿಸಿದರು.
ಚುನಾವಣಾ ಪೂರ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಭರವಸೆಯಂತೆ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ ಹಾಗೂ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಕೊಡುಗೆಯನ್ನು ನೀಡಿದ್ದಾರೆ. ಇದರ ಜೊತೆಗೆ ಕ್ರಿಶ್ಚಿಯನ್ ಸಮುದಾಯ ನಡೆಸುವ ಆಸ್ಪತ್ರೆಗಳಿಗೆ ಅನುದಾನವನ್ನು ಒದಗಿಸುವ ನಿಟ್ಟಿನಲ್ಲಿ ಕಾನೂನು ರೂಪಿಸಲು ಚಿಂತನೆ ನಡೆಸಿ ಮಾತುಕತೆ ನಡೆಸಿದ್ದೇನೆ ಎಂದು ತಿಳಿಸಿದರು. ಅಲ್ಲದೆ ಶಾಲೆಗಳ ರಕ್ಷಣೆಗೆ ಮುಂದಾಗುತ್ತೇವೆ ಎಂದು ಭರವಸೆ ನೀಡಿದರು. ಜೆರುಸ್ಲೇಮ್ ಗೆ ಹೋಗುವ ಸಮುದಾಯದ ಹಿರಿಯರಿಗೆ ಸಬ್ಸಿಡಿ ದರದಲ್ಲಿ ಕ್ರೈಸ್ತ ಸಮುದಾಯದ ಅನುದಾನವನ್ನು ಬಳಸಲು ಯೋಜನೆ ರೂಪಿಸುವ ಯೋಚನೆ ಮಾಡಿದ್ದೇವೆ,ಮುಂದಿನ ದಿನಗಳಲ್ಲಿ ಎಲ್ಲಾ ಬೇಡಿಕೆಗಳಿಗೆ ಸದಾ ಸ್ಪಂದನೆ ನೀಡುತ್ತೇವೆ ಎಂದು ಭರವಸೆ ನೀಡಿದರು.
ಕ್ರೈಸ್ತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾವಂತರಾಗಿದ್ದಾರೆ, ಆದರೆ ನಮ್ಮ ಜಿಲ್ಲೆಯಲ್ಲಿಯೇ ಅವಕಾಶಗಳನ್ನು ಬಳಸಿಕೊಂಡು ಸರಕಾರಿ ನೌಕರಿ ಅಥವಾ ದೊಡ್ಡ ಉದ್ಯಮದ ಮೂಲಕ ಕೊಡುಗೆಯನ್ನು ನೀಡಬೇಕು ಎಂದು ಮನವಿ ಮಾಡಿದರು.
ವೇದಿಕೆಯಲ್ಲಿ ಬೂಡ ಮಾಜಿ ಅಧ್ಯಕ್ಷ ಪಿಯೂಸ್ ಎಲ್.ರೋಡ್ರಿಗಸ್,ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷ ಅರುಣ್ ರೋಶನ್ ಡಿ.ಸೋಜ, ಕಥೋಲಿಕ್ ಸಭಾ ಬಂಟ್ವಾಳ ಇದರ ಅಧ್ಯಕ್ಷ ಜೋನ್ ಲಸ್ರಾದೋ, ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ್ (ರಿ.) ಇದರ ಅಧ್ಯಕ್ಷ ಸ್ಟೇನಿ ಲೋಬೋ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್, ನಿಗಮದ ಜಿಲ್ಲಾ ವ್ಯವಸ್ಥಾಪಕ ಯಶೋಧರ ಜೆ. , ಕಥೋಲಿಕ್ ಸಭಾ ಇದರ ಬಂಟ್ವಾಳ ವಲಯದ ಕಾರ್ಯದರ್ಶಿ ಆಸ್ಟಿನ್ ಲೋಬೋ, ಸಮುದಾಯ ಅಭಿವೃದ್ಧಿ ಸಂಚಾಲಕ ಸಿರಿಲ್ ನೊರೊನ್ಹಾ, ರಾಜಕೀಯ ಸಂಚಾಲಕ ರಾಯನ್ ರೊಡ್ರಿಗಸ್ ಮತ್ತಿತರರು ಉಪಸ್ಥಿತರಿದ್ದರು.
ಬಂಟ್ವಾಳ ಇದರ ಅಧ್ಯಕ್ಷ ಜೋನ್ ಲಸ್ರಾದೋ ಸ್ವಾಗತಿಸಿ, ಕಾರ್ಯದರ್ಶಿ ಅಸ್ಟಿನ್ ಲೋಬೋ ವಂದಿಸಿದರು, ಅಲ್ಫೋನ್ಸ್ ಪೆರ್ನಾಂಡಿಸ್ ನೀರ್ಕಾನ ಅವರು ಕಾರ್ಯಕ್ರಮ ನಿರೂಪಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…