ಕರಾವಳಿ

ಕಥೋಲಿಕ್ ಸಭಾ ಮಂಗಳೂರು ಪ್ರದೇಶ (ರಿ.) ಬಂಟ್ವಾಳ ವಲಯ, ಇವರ ಮುಂದಾಳತ್ವದಲ್ಲಿ ದ.ಕ.ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ನಿಗಮ ಇವರ ಸಹಯೋಗದೊಂದಿಗೆ ಅಲ್ಪಸಂಖ್ಯಾತರಿಗೆ ಲಭ್ಯವಿರುವ ಸವಲತ್ತುಗಳಿಗೆ ಮಾಹಿತಿ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ ಮೊಡಂಕಾಪು ಅನುಗ್ರಹ ಸಭಾ ಭವನದಲ್ಲಿ ನಡೆಯಿತು

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಫಾ.ವಲೇರಿಯನ್ ಡಿ.ಸೋಜ ಅವರು ಮಾತನಾಡಿ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಸರಕಾರದ ಕೆಲಸ ದೇವರ ಕೆಲಸ ಎಂಬ ಮನಸ್ಸಿನಿಂದ ಮಾಡಿದಾಗ ಸರಕಾರದ ಎಲ್ಲಾ ಸವಲತ್ತುಗಳು ಫಲಾನುಭವಿಗಳಿಗೆ ಸಿಗಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ.ಸೋಜ ಅವರನ್ನು ಸನ್ಮಾನಿಸಿದರು.
ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾತನಾಡಿ, ಯಡಿಯೂರಪ್ಪ ಅವರು ಮುಖ್ಯ ಮಂತ್ರಿಯಾಗಿದ್ದ ಸಂಧರ್ಬದಲ್ಲಿ ನನ್ನ ಶಾಸಕತ್ವದ ಅವಧಿಯಲ್ಲಿ ಕ್ಷೇತ್ರದ ಚರ್ಚ್ ಗಳ ಅಭಿವೃದ್ಧಿಗೆ ಅನುದಾನವನ್ನು ಒದಗಿಸಿದ್ದೇನೆ, ಈ ಬಾರಿಯೂ ಬಜೆಟ್ ನಲ್ಲಿ ಸರಕಾರ ಅನುದಾನವನ್ನು ಘೋಷಣೆ ಮಾಡಿದೆ,ಅದರ ಸಂಪೂರ್ಣ ಬಳಕೆ ಮಾಡಿಕೊಳ್ಳಿ ಎಂದು ತಿಳಿಸಿದರು.
ಸರಕಾರದ ವಿವಿಧ ಯೋಜನೆಗಳ ಮಾಹಿತಿ ಪಡೆದು ಪ್ರತಿಯೊಬ್ಬರು ಲಾಭ ಪಡೆಯಬೇಕು ಎಂದು ಮನವಿ ಮಾಡಿದರು.
ಸನ್ಮಾನ ಸ್ವೀಕರಿಸಿ ಬಳಿಕ ಸಭೆಯಲ್ಲಿ ಮಾತನಾಡಿದ ಐವನ್ ಡಿ‌.ಸೋಜ ಅವರು, ಜನಸಾಮಾನ್ಯರ ನಡುವಿನ ಬಾಂಧವ್ಯವನ್ನು ವೃದ್ದಿಸಿ, ಜವಾಬ್ದಾರಿಯಿಂದ ಜನರ ನಡುವೆ ಇದ್ದು,ಜನಸಾಮಾನ್ಯರ ಬದುಕಿಗೆ ಪೂರಕವಾದ ವಾತಾವರಣ ನಿರ್ಮಿಸಿ, ಸಮಸ್ಯೆ ಗಳನ್ನು ಪರಿಹಾರ ಮಾಡುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಕರ್ತವ್ಯ ನಿರ್ವಹಿಸಬೇಕಿದೆ ಎಂದು ತಿಳಿಸಿದರು.


ಚುನಾವಣಾ ಪೂರ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಭರವಸೆಯಂತೆ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ ಹಾಗೂ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಕೊಡುಗೆಯನ್ನು ನೀಡಿದ್ದಾರೆ. ಇದರ ಜೊತೆಗೆ ಕ್ರಿಶ್ಚಿಯನ್ ಸಮುದಾಯ ನಡೆಸುವ ಆಸ್ಪತ್ರೆಗಳಿಗೆ ಅನುದಾನವನ್ನು ಒದಗಿಸುವ ನಿಟ್ಟಿನಲ್ಲಿ ಕಾನೂನು ರೂಪಿಸಲು ಚಿಂತನೆ ನಡೆಸಿ ಮಾತುಕತೆ ನಡೆಸಿದ್ದೇನೆ ಎಂದು ತಿಳಿಸಿದರು. ಅಲ್ಲದೆ ಶಾಲೆಗಳ ರಕ್ಷಣೆಗೆ ಮುಂದಾಗುತ್ತೇವೆ ಎಂದು ಭರವಸೆ ನೀಡಿದರು. ಜೆರುಸ್ಲೇಮ್ ಗೆ ಹೋಗುವ ಸಮುದಾಯದ ಹಿರಿಯರಿಗೆ ಸಬ್ಸಿಡಿ ದರದಲ್ಲಿ ಕ್ರೈಸ್ತ ಸಮುದಾಯದ ಅನುದಾನವನ್ನು ಬಳಸಲು ಯೋಜನೆ ರೂಪಿಸುವ ಯೋಚನೆ ಮಾಡಿದ್ದೇವೆ,ಮುಂದಿನ ದಿನಗಳಲ್ಲಿ ಎಲ್ಲಾ ಬೇಡಿಕೆಗಳಿಗೆ ಸದಾ ಸ್ಪಂದನೆ ನೀಡುತ್ತೇವೆ ಎಂದು ಭರವಸೆ ನೀಡಿದರು.
ಕ್ರೈಸ್ತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾವಂತರಾಗಿದ್ದಾರೆ, ಆದರೆ ನಮ್ಮ ಜಿಲ್ಲೆಯಲ್ಲಿಯೇ ಅವಕಾಶಗಳನ್ನು ಬಳಸಿಕೊಂಡು ಸರಕಾರಿ ನೌಕರಿ ಅಥವಾ ದೊಡ್ಡ ಉದ್ಯಮದ ಮೂಲಕ ಕೊಡುಗೆಯನ್ನು ನೀಡಬೇಕು ಎಂದು ಮನವಿ ಮಾಡಿದರು.
ವೇದಿಕೆಯಲ್ಲಿ ಬೂಡ ಮಾಜಿ ಅಧ್ಯಕ್ಷ ಪಿಯೂಸ್ ಎಲ್.ರೋಡ್ರಿಗಸ್,ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷ ಅರುಣ್ ರೋಶನ್ ಡಿ.ಸೋಜ, ಕಥೋಲಿಕ್ ಸಭಾ ಬಂಟ್ವಾಳ ಇದರ ಅಧ್ಯಕ್ಷ ಜೋನ್ ಲಸ್ರಾದೋ, ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ್ (ರಿ.) ಇದರ ಅಧ್ಯಕ್ಷ ಸ್ಟೇನಿ ಲೋಬೋ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್, ನಿಗಮದ ಜಿಲ್ಲಾ ವ್ಯವಸ್ಥಾಪಕ ಯಶೋಧರ ಜೆ. , ಕಥೋಲಿಕ್ ಸಭಾ ಇದರ ಬಂಟ್ವಾಳ ‌ವಲಯದ ಕಾರ್ಯದರ್ಶಿ ಆಸ್ಟಿನ್ ಲೋಬೋ, ಸಮುದಾಯ ಅಭಿವೃದ್ಧಿ ಸಂಚಾಲಕ ಸಿರಿಲ್ ನೊರೊನ್ಹಾ, ರಾಜಕೀಯ ಸಂಚಾಲಕ ರಾಯನ್ ರೊಡ್ರಿಗಸ್ ಮತ್ತಿತರರು ಉಪಸ್ಥಿತರಿದ್ದರು.
ಬಂಟ್ವಾಳ ಇದರ ಅಧ್ಯಕ್ಷ ಜೋನ್ ಲಸ್ರಾದೋ ಸ್ವಾಗತಿಸಿ, ಕಾರ್ಯದರ್ಶಿ ಅಸ್ಟಿನ್ ಲೋಬೋ ವಂದಿಸಿದರು, ಅಲ್ಫೋನ್ಸ್ ಪೆರ್ನಾಂಡಿಸ್ ನೀರ್ಕಾನ ಅವರು ಕಾರ್ಯಕ್ರಮ ನಿರೂಪಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…

1 day ago

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…

1 day ago

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…

1 day ago

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…

1 day ago

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…

2 days ago

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…

2 days ago