ಜನ ಮನದ ನಾಡಿ ಮಿಡಿತ

Advertisement

ಸುಬ್ರಹ್ಮಣ್ಯದಲ್ಲಿ ಗುಡ್ಡ ಕುಸಿಯುವ ಭೀತಿ, ಮುಂಜಾಗ್ರತಾ ಕ್ರಮ.

ಕಡಬ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಿಂದ ಸ್ವಲ್ಪ ದೂರದಲ್ಲಿರುವ ನೂಚಿಲದ ಗುಡ್ಡ ಕುಸಿಯುವ ಪರಿಸ್ಥಿತಿಯಿರುವ ಕಾರಣ ಇಲ್ಲಿನ 8 ಕುಟುಂಬಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಯಾವುದೇ ಸಮಯದಲ್ಲಿ ಈ ಗುಡ್ಡ ಕುಸಿಯುವ ಸಂಭವವಿದ್ದು ಮುಂಜಾಗ್ರತೆ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಅಭಯ ಪ್ರವಾಸಿ ಮಂದಿರದಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ 8 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.
ಕಡಬ ತಹಶೀಲ್ದಾರ್ ರಮೇಶ್ ಬಾಬು ಅವರು ಈ ಕುಟುಂಬಗಳಿಗೆ ನೋಟಿಸ್ ಜಾರಿ ಮಾಡಿದ್ದು, ತಕ್ಷಣವೇ ತಮ್ಮ ಮನೆಗಳನ್ನು ತೊರೆದು ಬೇರೆ ಕಡೆ ವಾಸ್ತವ್ಯ ಹೂಡಬೇಕು ಅಥವಾ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಗೊಳ್ಳಬೇಕು ಎಂದು ಸೂಚಿಸಿದರು. ಸುಬ್ರಹ್ಮಣ್ಯದ ನೂಚಿಲದಲ್ಲಿ ಬೆಟ್ಟದ ಆಸುಪಾಸಿನಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಮನೆಗಳನ್ನು ಮಳೆಗಾಲ ಮುಗಿಯುವವರೆಗೆ ಬಳಸದಂತೆಯೂ ಸೂಚಿಸಲಾಗಿದೆ. ಇದರಿಂದಾಗಿ ಸುತ್ತಲ ಪರಿಸರದ ಜನರು ಪರದಾಡುವಂತಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!