ಕಿನ್ನಿಗೋಳಿ: ಶ್ರೀ ನಂದಿಕೇಶ್ವರ ನಾಟಕ ಸಂಘ ಮಂಗಳೂರು ಇದರ ಸಂಯೋಜನೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಕಾರದೊಂದಿಗೆ ದಿ.ಪಿಬಿ ರೈ ಬೆಳ್ಳಾರೆ ಇವರ ಸವಿನೆನಪಿನಲ್ಲಿ ಮುದುಕನ ಮದುವೆ ಎಂಬ ಹಾಸ್ಯ ನಾಟಕ ಪ್ರದರ್ಶನ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಜರುಗಿತು.
ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಆಶೀರ್ವಚನದ ನುಡಿಗಳನ್ನಾಡಿದ ಕಟೀಲು ಕ್ಷೇತ್ರದ ಅನುವಂಶಿಕ ಮೊಕ್ತೇಸರ ಲಕ್ಷ್ಮಿನಾರಾಯಣ ಅಸ್ರಣ್ಣ ಅವರು, “ಇದೊಂದು ವಿಶಿಷ್ಟ ಕಾರ್ಯಕ್ರಮ. ನಂದಿಕೇಶ್ವರ ನಾಟಕ ತಂಡದಲ್ಲಿ ಸಿನಿಮಾ ಕ್ಷೇತ್ರದ ಅನೇಕ ಹಿರಿಯ ಕಲಾವಿದರು ಬಣ್ಣ ಹಚ್ಚಿದ್ದಾರೆ. ಸಾವಿರಾರು ಪ್ರದರ್ಶನ ಕಂಡ ಈ ನಾಟಕಕ್ಕೆ ಇಂದಿಗೂ ಜನರ ಬೆಂಬಲ ಸಿಗುತ್ತಿರುವುದು ನೋಡಿದರೆ ಖುಷಿಯಾಗುತ್ತದೆ. ಮುಂದೆಯೂ ಈ ತಂಡದ ಮೂಲಕ ಇನ್ನಷ್ಟು ನಾಟಕ ಪ್ರದರ್ಶನಗಳು ನಡೆಯಲಿ” ಎಂದರು.ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಮಾತನಾಡಿ, “ನಾಟಕಗಳಿಗೆ ಮತ್ತು ಕಲಾವಿದರಿಗೆ ಜನರ ಪ್ರೋತ್ಸಾಹ ಬೇಕು. ಕಳೆದ 40 ವರ್ಷಗಳಿಂದ ಶ್ರೀ ನಂದಿಕೇಶ್ವರ ನಾಟಕ ಸಂಘ ಜನರನ್ನು ರಂಜಿಸುವ ಮೂಲಕ ಶ್ಲಾಘನೀಯ ಕಾರ್ಯ ಮಾಡುತ್ತಿದೆ. ಅವರಿಗೆ ಶುಭವಾಗಲಿ“ ಎಂದರು.
ವೇದಿಕೆಯಲ್ಲಿ ಯುಗಪುರುಷ ಪತ್ರಿಕೆ ಸಂಪಾದಕ ಭುವನಾಭಿರಾಮ ಉಡುಪ, ನಟ ಸುಂದರ ರೈ ಮಂದಾರ, ರಾಜ್ ಸಂಪಾಜೆ, ಸಾಯಿನಾಥ್ ಮಾಸ್ಟರ್, ಶಿಲ್ಪಾ ಗೊಂಬೆ ಬಳಗದ ರಮೇಶ್ ಕಲ್ಲಡ್ಕ, ನಾಗರಾಜ್ ಆಚಾರ್ಯ, ತುಳುವೆ ಪ್ರಕಾಶ್, ವಿಕ್ರಂ ಜಾದೂಗಾರ್, ಉದ್ಯಮಿ ಗಣೇಶ್ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.
ವೇದಿಕೆಯಲ್ಲಿ ಕಲಾವಿದ ರಾಜ್ ಸಂಪಾಜೆ, ಭುವನಾಭಿರಾಮ ಉಡುಪ, ದೀಪಕ್ ರೈ ಪಾಣಾಜೆ ಅವರನ್ನು ಅತಿಥಿಗಳು ಸನ್ಮಾನಿಸಿದರು.ಪತ್ರಕರ್ತ ಶರತ್ ಶೆಟ್ಟಿ ಕಿನ್ನಿಗೋಳಿ ಕಾರ್ಯಕ್ರಮ ನಿರೂಪಿಸಿದರು. ಸಾಯಿನಾಥ್ ಪ್ರಾಸ್ತಾವಿಕ ಮಾತಾಡಿದರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…