ಮೂಡುಬಿದಿರೆ: ವಿಧಾನಸಭಾ ಕ್ಷೇತ್ರದ ಮೂಡುಬಿದಿರೆ ತಾಲೂಕಿನ ಬೆಳುವಾಯಿಯಲ್ಲಿ ನಡೆಯುತ್ತಿರುವ ನೂತನ ಹೆದ್ದಾರಿ ನಿರ್ಮಾಣ ಕಾರ್ಯದಲ್ಲಿ ಕೆಲವು ಸಮಸ್ಯೆಗಳು ಕಂಡು ಬಂದಿದ್ದು ಈ ಬಗ್ಗೆ ನಿರ್ಮಾಣ ಗುತ್ತಿಗೆ ಪಡೆದಿರುವ ಕಂಪನಿಯ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಶಾಸಕ ಉಮಾನಾಥ ಕೋಟ್ಯಾನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಸಮಸ್ಯೆಗಳಿರುವಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.ಉದ್ಯಮಿ ಭಾಸ್ಕರ್ ಕೋಟ್ಯಾನ್,ಮಹಾಶಕ್ತಿಕೇಂದ್ರ ಅಧ್ಯಕ್ಷ ಸೋಮನಾಥ್ ಕೋಟ್ಯಾನ್, ಬೆಳುವಾಯಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಭಾಸ್ಕರ್ ಆಚಾರ್ಯ, ಸುಶೀಲ, ಗ್ರಾಮ ಪಂಚಾಯತ್ ಸದಸ್ಯರಾದ ಭರತ್ ಶೆಟ್ಟಿ, ಸೂರಜ್ ಆಳ್ವ, ರಘು, ರವೀಂದ್ರ ನಾಯ್ಕ್, ಶ್ರೀಮತಿ ಭಾಗ್ಯಶ್ರೀ, ಗ್ರಾಮ ಪಂಚಾಯತ್ ಮಾಜಿ ಸದಸ್ಯ ಸದಾನಂದ ಶೆಟ್ಟಿ, ಶಕ್ತಿಕೇಂದ್ರ ಪ್ರಮುಮ್ ಸಂತೋಷ್ ಆಚಾರ್ಯ ಹಾಗೂ ಇತರರು ಉಪಸ್ಥಿತರಿದ್ದರು.




