ಮೂಡುಬಿದಿರೆ: ಜೈನ ಪ.ಪೂ. ಕಾಲೇಜಿನಲ್ಲಿ 2024-25ರ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವನ್ನು ಶನಿವಾರ ಧವಳಾ ಕಾಲೇಜಿನ ಉಪನ್ಯಾಸಕ ಸುದೀಪ್ ಬುನ್ನನ್ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವಿದ್ಯಾರ್ಥಿಗಳು ತುಂಬಾ ಅದೃಷ್ಟ ಶಾಲಿಗಳು ಯಾಕೆಂದರೆ ಅವರು ಜೀವನದ ಪಾಠವನ್ನು ರಾಷ್ಟ್ರೀಯ ಸೇವಾ ಯೋಜನೆಯಿಂದ ಕಲಿಯುತ್ತಾರೆ ಹಾಗೂ ನಾಯಕತ್ವ ಗುಣ, ವ್ಯಕ್ತಿತ್ವ ವಿಕಸನ,ಸಹ ಬಾಳ್ವೆ ಸೇವಾ ಮನೋಭಾವಗಳನ್ನು ಬೆಳೆಸಿಕೊಳ್ಳುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಉತ್ತಮ ವೇದಿಕೆ ಎಂದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಾ! ಪ್ರಭಾತ್ ಬಲ್ನಾಡ್ ವಹಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿದರು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವದ ಬಗ್ಗೆ ತಿಳಿಸಿದರು.
ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ವಾಣಿ ಇವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಹ- ಯೋಜನಾಧಿಕಾರಿಯದ ವನಿತಾ ಕೆಂಬಾರೆ ಸ್ವಾಗತಿಸಿದರು. ನಿತೀಕ್ಷಾ ಕಾರ್ಯಕ್ರಮ ನಿರೂಪಿಸಿದರು. ಘಟಕದ ನಾಯಕಿ ರಾಧಿಕಾ ವಂದಿಸಿದರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ಉಪನ್ಯಾಸಕರುಗಳಾದ ನವೀನ್ ಎಂ ಹೆಗ್ಡೆ , ಉದಯ್ ಕುಮಾರ್ ಮತ್ತು ನೀಶಾ ಜೈನ್ ಹಾಗೂ ಸಹೋದ್ಯೋಗಿಗಳು ಉಪಸ್ಥಿತರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…