ಉಡುಪಿ: ಕಳೆದ 8 ದಿನಗಳಿಂದ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ- ಕೇರಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೊರಗ ಸಮುದಾಯದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಕೊರಗ ಸಮುದಾಯದ ಮುಖಂಡರು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಕೆ. ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ, ಕೊರಗ ಸಮುದಾಯದ ನ್ಯಾಯ ಸಮ್ಮತ ಬೇಡಿಕೆಗಳಾದ ಭೂಮಿ ಹಕ್ಕು ಹಾಗೂ ವಿದ್ಯಾವಂತ ಕೊರಗ ಸಮುದಾಯದ ಯುವ ಜನತೆಗೆ ಅರ್ಹ ಸರಕಾರಿ ಉದ್ಯೋಗದ ಒದಗಿಸುವ ಬಗ್ಗೆ ಈಗಾಗಲೇ ರಾಜ್ಯ ಸರಕಾರದ ಗಮನಕ್ಕೆ ತರಲಾಗಿದ್ದು, ಶೀಘ್ರದಲ್ಲಿಯೇ ಕೊರಗ ಸಮುದಾಯದ ಮುಖಂಡರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಬೇಡಿಕೆ ಈಡೇರಿಕೆಗೆ ಆಗ್ರಹಿಸುವುದಾಗಿ ತಿಳಿಸಿದರು. ಜಿಲ್ಲಾಧಿಕಾರಿಗಳು ಜಿಲ್ಲೆಯ ಕೊರಗ ಸಮುದಾಯದ ಗಂಭೀರ ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಉಸ್ತುವಾರಿ ಸಚಿವರು ಹಾಗೂ ಸಂಬಂಧಿತ ಇಲಾಖೆಗೆ ಸೂಕ್ತ ವರದಿ ನೀಡುವಂತೆ ಶಾಸಕರು ಕೊರಗ ಸಮುದಾಯದ ಪರವಾಗಿ ಹೇಳಿದರು.ಕೊರಗ ಸಮುದಾಯದ ಮುಖಂಡರು ತಮ್ಮ ಬೇಡಿಕೆ ಹಾಗೂ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಕೊರಗ ಸಮುದಾಯದ ಮುಖಂಡರಾದ ಸುಶೀಲ, ಸಂಜೀವ, ಶೇಖರ್, ಬೊಗ್ರ, ಪವಿತ್ರ, ಐ. ಟಿ. ಡಿ. ಪಿ. ಯೋಜನಾಧಿಕಾರಿ ನಾರಾಯಣ ಸ್ವಾಮಿ ಉಪಸ್ಥಿತರಿದ್ದರು.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…