ಮುಲ್ಕಿ: ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಕಚೇರಿ ಹಾಗೂ ಮುಲ್ಕಿ ಸರಕಾರಿ ಪದವಿಪೂರ್ವ ಕಾಲೇಜ್ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಅಂತರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ಮತ್ತು ಅಕ್ರಮ ಸಾಗಾಣಿಕೆ ತಡೆಗಟ್ಟುವಿಕೆ ದಿನಾಚರಣೆ ಹಾಗೂ ಮಲೇರಿಯಾ ಮತ್ತು ಡೆಂಗ್ಯೂ ಬಗ್ಗೆ ಮಾಹಿತಿ ಕಾರ್ಯಾಗಾರ 2024 ಹಾಗೂ ಕಾಲೇಜಿನ 2024-2 5ನೇ ಸಾಲಿನ ಎನ್.ಎಸ್.ಎಸ್.ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಕಾರ್ನಾಡ್ ಸರಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಾಗಾರವನ್ನು ಮುಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿ ಇಂದು ಎಂ. ಉದ್ಘಾಟಿಸಿ ಮಾತನಾಡಿ ಪರಿಸರ ಸ್ವಚ್ಛವಾಗಿ ಇಡುವುದರ ಜೊತೆಗೆ ಮಲೇರಿಯಾ, ಡೆಂಗ್ಯೂ ಸಹಿತ ಮಾರಕ ರೋಗಗಳ ನಿರ್ಮೂಲನೆಗೆ ಜನರ ಸಹಕಾರ ಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ವಾಸುದೇವ ಬೆಳ್ಳೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮುಲ್ಕಿ ನ. ಪಂ ಸದಸ್ಯ ಪುತ್ತು ಬಾವ, ಕಾಲೇಜು ಸುಧಾರಣಾ ಮಂಡಳಿಯ ಅಶೋಕ್ ಕುಮಾರ್ ಶೆಟ್ಟಿ, ಮುಲ್ಕಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕೃಷ್ಣ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಉಳೆಪಾಡಿ,ಮುಕ್ಕ ಶ್ರೀನಿವಾಸ್ ಮೆಡಿಕಲ್ ಕಾಲೇಜಿನ ಡಾ. ಮಿಥುನ್ ಕುಮಾರ್, ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಡಾ. ರೇಖಾ ಬಿ ಎಸ್ ಮತ್ತಿತರರು ಉಪಸ್ಥಿತರಿದ್ದರು. ಎಲಿಯಮ್ಮ ಸ್ವಾಗತಿಸಿದರು, ಉಪನ್ಯಾಸಕರಾದ ರಮಾನಂದ ಧನ್ಯವಾದ ಅರ್ಪಿಸಿದರು, ಲಿಡಿಯ ನಿರೂಪಿಸಿದರು.
ಬಳಿಕ ಸಂಪನ್ಮೂಲ ವ್ಯಕ್ತಿಯಾಗಿ ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸಿ ಆರ್ ಪ್ರದೀಪ್ ಕುಮಾರ್ ಮಲೇರಿಯ ಸಹಿತ ಮಾರಕ ರೋಗಗಳ ನಿರ್ಮೂಲನೆ ಹಾಗೂ ಸುರಕ್ಷತೆ ಬಗ್ಗೆಮಾಹಿತಿ ನೀಡಿದರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…