ದಕ್ಷಿಣ ಕನ್ನಡ : ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಶಿರ್ತಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡು ಕೋಣಾಜೆ ವ್ಯಾಪ್ತಿಯ ಕುಕ್ಕುದ ಕಟ್ಟೆ ಸಮೀಪದ ಕುಂಟಲ ಹಾಗೂ ಇತರಡೆಗೆ ಸಂಪರ್ಕಿಸುವ ರಸ್ತೆಯನ್ನು ಸ್ಥಳೀಯ ಪಂಚಾಯತ್ ಸದಸ್ಯರು ಮುತುವರ್ಜಿ ವಹಿಸಿ ಸಂಚಾರ ಯೋಗ್ಯ ರಸ್ತೆಯನ್ನಾಗಿ ಮಾಡಿದ್ದು ಜನರು ಸಂತೋಷ ವ್ಯಕ್ತಪಡಿಸಿದ್ದಾರೆ, ಹಾಗೂ ಸಂಬಂಧ ಪಟ್ಟವರಿಗೆ ಧನ್ಯವಾದಗಳು ತಿಳಿಸಿದ್ದಾರೆ.
ಇತ್ತೀಚೆಗೆ ಸುದ್ದಿ ಆಗಿದ್ದ ರಸ್ತೆಯ ದುಷ್ಥಿತಿಯನ್ನು ಮನಗಂಡು, ಸಮಸ್ಯೆಯ ಗಂಭೀರತೆಯನ್ನು ಅರಿತು ರಸ್ತೆ ಬದಿಯ ಚರಂಡಿ ಸರಿಪಡಿಸಿ, ಕೆಸರು ತುಂಬಿದ ರಸ್ತೆಗೆ ಜೆಲ್ಲಿ ಹಾಸಿ ಭಾರಿ ಮಳೆ ಮದ್ಯೆಯೇ ಸರಿಪಡಿಸಿದ್ದು ಜನರ ಪ್ರಶಂಸೆಗೆ ಪಾತ್ರವಾಗಿದೆ.
ಅಲ್ಲದೆ ಇತ್ತೀಚೆಗೆ ಸುರಿದ ಭಾರಿ ಮಳೆ ಮತ್ತು ಗಾಳಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವೆಡೆ ಸಮಸ್ಯೆಯಾಗಿದ್ದು, ಹಲವು ವಿದ್ಯುತ್ ಕಂಬಗಳು ಉರುಳಿದ್ದು, ರಸ್ತೆಗೆ ಮರ ಉರುಳಿದ್ದು, ಹೆಚ್ಚಿನ ಕಡೆಗಳಲ್ಲಿ ಗ್ರಾಮ ಪಂಚಾಯತ್ ಸದಸ್ಯರ ಸಹಕಾರದೊಂದಿಗೆ, ಅಧಿಕಾರಿಗಳು ಜನಪ್ರತಿನಿಧಿಗಳು ಹಾಗೂ ಸ್ಥಳೀಯರ ಸಹಕಾರದೊಂದಿಗೆ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿದ್ದು, ನಾಗರಿಕರು ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…