ಉಡುಪಿಯಲ್ಲಿ ಈಚರ್ ಲಾರಿಗೆ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಹೈಕಾಡಿಯಲ್ಲಿ ನಡೆದಿದೆ.

ಮೃತ ಸವಾರನನ್ನು ಬೆಳ್ವೆ ನಿವಾಸಿ ನಾಗರಾಜ್ (40) ಎಂದು ಗುರುತಿಸಲಾಗಿದೆ. ಅವರು ಬೆಳ್ವೆಯಿಂದ ಕುಂದಾಪುರದ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಈಚರ್ ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸಮೇತ ರಸ್ತೆಗೆ ಬಿದ್ದ ನಾಗರಾಜ್ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಶಂಕರ್ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



