ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿಗೆ ಸಿಎಂ ಪ್ರಶ್ನೆಗಳ ಸುರಿಮಳೆ
ಖರ್ಚು ಕಡಿಮೆ ಮಾಡಲು ತಡೆಗೋಡೆ ನಿರ್ಮಿಸದ್ದಕ್ಕೆ, 90 ಡಿಗ್ರಿಯಲ್ಲಿ ಗುಡ್ಡ ಕಡಿದಿರುವುದಕ್ಕೆ ಸಿಎಂ ಆಕ್ರೋಶ.ಕೇಂದ್ರ ಸಚಿವ ಗಡ್ಕರಿ ಅವರಿಗೆ ಪತ್ರ ಬರೆದು ವಿವರಿಸಲು ತೀರ್ಮಾನ: ಸಿಎಂ ಸಿದ್ದರಾಮಯ್ಯ ಶಿರಾಡಿ ಘಾಟ್ ಆ 3: ಶಿರಾಡ್ ಘಾಟ್ ಗುಡ್ಡ ಕುಸಿತದ ಭೀಕರತೆಗೆ ಶಾಕ್ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರಿಗೆ ಸಾಲು ಸಾಲು ಪ್ರಶ್ನೆಗಳ ಸುರಿಮಳೆಗೈದರು.
ಗುಡ್ಡ ಕುಸಿತದ ಸ್ಥಳ ಪರಿಶೀಲನೆಗೆ ಅಧಿಕಾರಿಗಳ ತಂಡದೊಂದಿಗೆ ರಸ್ತೆ ಮಾರ್ಗವಾಗಿ ಘಟನಾ ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದಕ್ಕೆ ಅಸಮಾಧಾನಗೊಂಡು ಗುಡ್ಡ ಕುಸಿತಕ್ಕೆ ಇದೂ ಕೂಡ ಪ್ರಮುಖ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಸ್ತೆ ಕಾಮಗಾರಿ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಿಎಂ ಗೆ ವಿವರಿಸುತ್ತಾ, “ಒಟ್ಟು 45 km ನಲ್ಲಿ 35 km ಹೈವೇ ಕಾಮಗಾರಿ ಮುಗಿದಿದೆ. 10 km ಬಾಕಿ ಇದೆ. ಆದರೆ ಇಲ್ಲಿಯವರೆಗೂ ಎಲ್ಲೂ ತಡೆಗೋಡೆಗಳನ್ಜು ನಿರ್ಮಿಸಿಲ್ಲ, ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿ ಅದರ ಆಧಾರದಲ್ಲಿ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಂತೆ ಇಲ್ಲ” ಎಂದು ವಿವರಿಸಿದರು.
ಮೊಣಕಾಲುದ್ದುದ ಕೆಸರಲ್ಲೇ ಗುಡ್ಡ ಕುಸಿತದ ಜಾಗದುದ್ದಕ್ಕೂ ನಡೆದು ಪರಿಶೀಲಿಸಿದ ಮುಖ್ಯಮಂತ್ರಿಗಳು ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ SDRF ತಂಡದೊಂದಿಗೆ ಕೆಲ ಹೊತ್ತು ಚರ್ಚಿಸಿದರು.
ಬಳಿಕ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರ ಮುಂದೆ ಸಿಎಂ ಸಾಲು ಸಾಲು ಪ್ರಶ್ನೆಗಳನ್ನು ಇಟ್ಟರು…
*ಹಣ ಉಳಿಸುವ ಉದ್ದೇಶದಿಂದ ಕಡಿಮೆ ಭೂಮಿ ಸ್ವಾಧೀನಗೊಳಿಸಿಕೊಳ್ಳುವುದು, ಬಳಿಕ ಖರ್ಚು ಉಳಿಸಲು 90 ಡಿಗ್ರಿಯಲ್ಲಿ ಗುಡ್ಡಗಳನ್ನು ಕತ್ತರಿಸಿದ್ದೀರಿ. ಇದು ಅವೈಜ್ಞಾನಿಕ ಕಾಮಗಾರಿ ಅಲ್ಲವೇ?
*ಗುಡ್ಡಗಳನ್ನು 30 ರಿಂದ 45 ಡಿಗ್ರಿಯಲ್ಲಿ ಕತ್ತರಿಸಿ ತಡೆಗೋಡೆ ನಿರ್ಮಿಸಿದ್ದರೆ ಮಣ್ಣು ಕುಸಿತವನ್ನು ತಡೆಯಬಹುದಿತ್ತಲ್ಲವೇ?
*ಕಾಮಗಾರಿ ಆರಂಭಿಸುವ ಮೊದಲು ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿದ್ದೀರಾ? ಅದಕ್ಕೆ ತಕ್ಕಂತೆ ಮುಂಜಾಗ್ರತಾ ಕ್ರಮ ಏಕೆ ವಹಿಸಿಲ್ಲ ಎಂದು ಪ್ರಶ್ನಿಸಿದರು.
ವಿಲಾಸ್ ಅವರಿಂದ ಸೂಕ್ತ ಉತ್ತರ ಬರದಿದ್ದಾಗ ಒಟ್ಟಾರೆ ಸ್ಥಿತಿ ಗತಿ ಕುರಿತು ಕೇಂದ್ರ ಸಚಿವರಾದ ಗಡ್ಕರಿ ಅವರಿಗೆ ಪತ್ರ ಬರೆಯುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು.
ಹಾಸನ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ, ಶಾಸಕ ಶಿವಲಿಂಗೇಗೌಡರು, ಸಂಸದ ಶ್ರೇಯಸ್ ಪಟೇಲ್ , ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯಬಾರಾಯಣ್ ಸೇರಿ ಹಿರಿಯ ಅಧಿಕಾರಿಗಳ ತಂಡವೇ ಸ್ಥಳದಲ್ಲಿತ್ತು.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್‌ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…