ಜನ ಮನದ ನಾಡಿ ಮಿಡಿತ

Advertisement

ತುಳುನಾಡ್ ಬಂಟ ಮಹಿಳಾ ಸಂಘದ ವತಿಯಿಂದ ಆಟಿದ ಕೂಟ ಕಾರ್ಯಕ್ರಮ

ತುಳುನಾಡ್ ಬಂಟ ಮಹಿಳಾ ಸಂಘದ ವತಿಯಿಂದ ಆಟಿದ ಕೂಟ ಕಾರ್ಯಕ್ರಮ ಮುಲ್ಕಿ ಸಮೀಪದ ಕೆಂಚನಕೆರೆ ಅಂಬಾ ನಿವಾಸದಲ್ಲಿ ನಡೆಯಿತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಸಂಘದ ಅಧ್ಯಕ್ಷೆ ಶಮೀನಾ ಆಳ್ವ ವಹಿಸಿದ್ದರು .ಮುಖ್ಯ ಅತಿಥಿಗಳಾಗಿ ಪರಿಸರ ಪ್ರೇಮಿ ಸುಮತಿ ಶೆಟ್ಟಿ ಕೆಮ್ರಾಲ್ ರವರು ಹಿಂದಿನ ಕಾಲದ ಆಷಾಢ ಮಾಸದ ಬಗ್ಗೆ ಮಾಹಿತಿ ನೀಡಿ ಮೊಬೈಲ್ ತಂತ್ರಜ್ಞಾನದ ಯುಗದಲ್ಲಿ ಹಿಂದಿನ ಕಾಲದ ಆಷಾಢ ಮಾಸದ ಕಷ್ಟದ ದಿನಗಳು ಅಮೂಲ್ಯವಾಗಿದ್ದು ಅದನ್ನು ನೆನಪಿಸಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು.ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ,ತುಳುನಾಡ್ ಬಂಟ ಮಹಿಳಾ ಸಂಘದ ಉಪಾಧ್ಯಕ್ಷೆ ರೋಹಿಣಿ ಶೆಟ್ಟಿ, ಕಾರ್ಯದರ್ಶಿ ಕುಸುಮಾ ಆರ್ ಶೆಟ್ಟಿ, ಅಮೂಲ್ಯ ಉಮೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಾದ ವಿಘ್ನೇಶ್ ಹಾಗೂ ಶ್ರಾವ್ಯ ರವರನ್ನು ಗೌರವಿಸಲಾಯಿತು. ಅಮೂಲ್ಯ ಉಮೇಶ್ ನಿರೂಪಿಸಿದರು. ಬಳಿಕ ಸಂಘದ ಸದಸ್ಯರು ಆಷಾಡ ಮಾಸದ ವಿವಿಧ ತಿಂಡಿಗಳ ಸವಿಯುಟ ಮಾಡಿ ಸಂಭ್ರಮಿಸಿದರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!