ಸಣ್ಣ ಸಣ್ಣ ಗೂಡಂಗಡಿಗಳಿಗೆ ನುಗ್ಗಿದ ಕಳ್ಳರು ಸಾಮಾಗ್ರಿಗಳನ್ನು ಕಳವು ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಬುಡೋಳಿ ಮತ್ತು ಗಡಿಯಾರ ಎಂಬಲ್ಲಿ ನಡೆದಿದೆ.
ಬುಡೋಳಿ ಕೇಶವ ಎಂಬವರ ಅಂಗಡಿಗೆ ನುಗ್ಗಿದ ಕಳ್ಳರು ಚಿಲ್ಲರೆ ಸಾಮಾಗ್ರಿಗಳಾದ ಸಿಗರೇಟ್ ಕಳವು ಮಾಡಿದ್ದು ಇವರು ಪೋಲೀಸ್ ದೂರು ನೀಡಿಲ್ಲ ಎಂದು ಹೇಳಲಾಗಿದೆ. ಗಡಿಯಾರ ಹರೀಶ್ ಪೂಜಾರಿ ಮತ್ತು ಲೋಕೇಶ್ ಕುಲಾಲ್ ಎಂಬವರ ಗೂಡಂಗಡಿಗೆ ನುಗ್ಗಿ ಒಂದು ಅಂಗಡಿಯಿಂದ ಅಡುಗೆ ಗ್ಯಾಸ್ ನ ಸಿಲಿಂಡರ್ ಕಳವು ಮಾಡಲಾಗಿದೆ ಎನ್ನಲಾಗಿದೆ.
ಅದರಲ್ಲಿ ಒಂದುಗೂಡಂಗಡಿ ಕಳೆದ ಒಂದು ತಿಂಗಳಿನಿಂದ ಬಂದ್ ಆಗಿತ್ತು.ಅದರೊಳಗಿದ್ದ ಸಾಮಾಗ್ರಿಗಳನ್ನು ಕಳವುಮಾಡಲಾಗಿದೆ ಎಂದು ಹೇಳಲಾಗಿದ್ದು,ಇಲ್ಲಿನ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ ಎನ್ನಲಾಗದ ಕಳ್ಳರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಹೇಳಲಾಗಿದೆ.
ಮಳೆಗಾಲದಲ್ಲಿ ಈ ಬಾಗದಲ್ಲಿ ಬೀಟ್ ಪೋಲೀಸರ ಸಂಚಾರ ಕಡಿಮೆಯಾಗಿದ್ದು, ಕಳ್ಳರ ದಾರಿ ಸುಗಮವಾಗಿ ಸಾಗಲು ಸಾಧ್ಯವಾಗಿದೆ ಎಂಬ ಆರೋಪ ಸ್ಥಳೀಯರದ್ದು.ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಅಂಗಡಿಗಳು ಇದಾಗಿದ್ದು, ವ್ಯಾಪ್ತಿಯ ಕಡೆ ಭಾಗವಾಗಿದೆ. ಪೋಲೀಸರಿಗೆ ಕಳ್ಳರ ಕಾಟವನ್ನು ಎದುರಿಸುವುದು ಸವಾಲಾಗಿದ್ದು, ಮಳೆಗಾಲದಲ್ಲಿ ಪ್ರತಿ ವರ್ಷ ಕಳ್ಳರ ಕೂಟ ಬಲಗೊಳ್ಳುತ್ತಿದ್ದು, ಸಾರ್ವಜನಿಲ ವಲಯಕ್ಕೆ ಒಂದು ರೀತಿಯ ಆತಂಕದ ಜೀವನವಾಗಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…