ಜನ ಮನದ ನಾಡಿ ಮಿಡಿತ

Advertisement

ಬಸ್ ನಲ್ಲಿ ಅಸ್ವಸ್ಥಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ಬಸ್ ನಲ್ಲೇ ಕರೆದುಕೊಂಡ ಬಂದ ಸಿಬ್ಬಂದಿ

ಬಸ್ ನಲ್ಲಿ ಸಂಚರಿಸುತ್ತಿರುವ ವೇಳೆ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಯುವತಿಯೊಬ್ಬಳನ್ನು ಚಾಲಕ ಬಸ್ ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋದ ಘಟನೆ ಉಡುಪಿಯಲ್ಲಿ ನಡೆದಿದೆ.

ಕರಾವಳಿಯಲ್ಲಿ ಖಾಸಗಿ ಬಸ್ ಸಿಬ್ಬಂದಿಯ ಸಮಯಪ್ರಜ್ಞೆಗೆ ಜನರು ಮೆಚ್ಚುಗೆ ಸೂಚಿಸಿದ್ದಾರೆ.ಉಡುಪಿಯಲ್ಲಿ ಈ ಘಟನೆ ನಡೆದಿದ್ದು, ಶಿರ್ವ ದಿಂದ ಉಡುಪಿಗೆ ಬರುತ್ತಿದ್ದ ನವೀನ್ ಎಂಬ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳು ಬಸ್ ಉಡುಪಿಯ ಹಳೆ ತಾಲ್ಲೂಕು ಕಚೇರಿ ಬರುವಾಗ ಅಸ್ವಸ್ಥಗೊಂಡಿದ್ದಾಳೆ. ಬಸ್ ನಲ್ಲೇ ವಾಂತಿ ಮಾಡಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಯುವತಿಯನ್ನು ಬಸ್ ಚಾಲಕ ಕೂಡಲೇ ಹತ್ತಿರದ ಡಾಕ್ಟರ್ ಟಿಎಂಎ ಪೈ ಆಸ್ಪತ್ರೆಗೆ ‌ಬಸ್ ನಲ್ಲೇ ಕರೆದುಕೊಂಡು ಹೋಗಿದ್ದಾರೆ. ಕೂಡಲೇ ಯುವತಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಯುವತಿಯ ಮನೆಯವರಿಗೆ ಮಾಹಿತಿ ನೀಡಿ ಮನೆಯವರು ಬರುವ ತನಕ ಯುವತಿಗೆ ಚಿಕಿತ್ಸೆಗೆ ಬಸ್ ಸಿಬ್ಬಂದಿ ಸಹಕಾರ ನೀಡಿದ್ದಾರೆ. ನವೀನ್ ಬಸ್ ನ ಚಾಲಕ ಶಶಿಕಾಂತ್, ನಿರ್ವಾಹಕ ಸಲೀಂ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿದೆ.

ಮಂಗಳೂರಿನಲ್ಲಿ ಇದೇ ರೀತಿ ಪ್ರಕರಣದಲ್ಲಿ ಎದೆ ನೋವಿನಿಂದ ಬಳಲುತ್ತಿದ್ದ ವಿಧ್ಯಾರ್ಥಿನಿಯನ್ನು ಆಸ್ಪತ್ರೆಗೆ ಸೇರಿಸಿ ಆಕೆಯ ಜೀವ ಉಳಿಸಲು ಬಸ್ ಸಿಬ್ಬಂದಿ ನೆರವಾಗಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!