ಬಸ್ ನಲ್ಲಿ ಸಂಚರಿಸುತ್ತಿರುವ ವೇಳೆ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಯುವತಿಯೊಬ್ಬಳನ್ನು ಚಾಲಕ ಬಸ್ ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋದ ಘಟನೆ ಉಡುಪಿಯಲ್ಲಿ ನಡೆದಿದೆ.
ಕರಾವಳಿಯಲ್ಲಿ ಖಾಸಗಿ ಬಸ್ ಸಿಬ್ಬಂದಿಯ ಸಮಯಪ್ರಜ್ಞೆಗೆ ಜನರು ಮೆಚ್ಚುಗೆ ಸೂಚಿಸಿದ್ದಾರೆ.ಉಡುಪಿಯಲ್ಲಿ ಈ ಘಟನೆ ನಡೆದಿದ್ದು, ಶಿರ್ವ ದಿಂದ ಉಡುಪಿಗೆ ಬರುತ್ತಿದ್ದ ನವೀನ್ ಎಂಬ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳು ಬಸ್ ಉಡುಪಿಯ ಹಳೆ ತಾಲ್ಲೂಕು ಕಚೇರಿ ಬರುವಾಗ ಅಸ್ವಸ್ಥಗೊಂಡಿದ್ದಾಳೆ. ಬಸ್ ನಲ್ಲೇ ವಾಂತಿ ಮಾಡಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಯುವತಿಯನ್ನು ಬಸ್ ಚಾಲಕ ಕೂಡಲೇ ಹತ್ತಿರದ ಡಾಕ್ಟರ್ ಟಿಎಂಎ ಪೈ ಆಸ್ಪತ್ರೆಗೆ ಬಸ್ ನಲ್ಲೇ ಕರೆದುಕೊಂಡು ಹೋಗಿದ್ದಾರೆ. ಕೂಡಲೇ ಯುವತಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಯುವತಿಯ ಮನೆಯವರಿಗೆ ಮಾಹಿತಿ ನೀಡಿ ಮನೆಯವರು ಬರುವ ತನಕ ಯುವತಿಗೆ ಚಿಕಿತ್ಸೆಗೆ ಬಸ್ ಸಿಬ್ಬಂದಿ ಸಹಕಾರ ನೀಡಿದ್ದಾರೆ. ನವೀನ್ ಬಸ್ ನ ಚಾಲಕ ಶಶಿಕಾಂತ್, ನಿರ್ವಾಹಕ ಸಲೀಂ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿದೆ.
ಮಂಗಳೂರಿನಲ್ಲಿ ಇದೇ ರೀತಿ ಪ್ರಕರಣದಲ್ಲಿ ಎದೆ ನೋವಿನಿಂದ ಬಳಲುತ್ತಿದ್ದ ವಿಧ್ಯಾರ್ಥಿನಿಯನ್ನು ಆಸ್ಪತ್ರೆಗೆ ಸೇರಿಸಿ ಆಕೆಯ ಜೀವ ಉಳಿಸಲು ಬಸ್ ಸಿಬ್ಬಂದಿ ನೆರವಾಗಿದ್ದರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…