ಕೇವಲ ಕಾಟಾಚಾರ ಮತ್ತು ಪ್ರಚಾರಕ್ಕಾಗಿ ಹಡೀಲುಗದ್ದೆ ಬೇಸಾಯ ಎಂದು ಬಿಂಬಿಸುವ ಕೆಲಸ ಆಗಬಾರದು. ಇದರಿಂದ ಅನ್ನೊಂದಷ್ಟು ಮಂದಿ ಭತ್ತದ ಬೇಸಾಯದತ್ತ ದೃಷ್ಟಿ ಹರಿಸುವಂತಾಗಬೇಕು. ಹಾಗಾಗಿ ವ್ಯವಸ್ಥಿತ ರೀತಿಯಲ್ಲಿ ಭತ್ತದ ಬೇಸಾಯ ನಡೆಯಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದ್ದಾರೆ.
ಇವರು ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಬಾರ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಯಾಂತ್ರೀಕೃತ ಬೇಸಾಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದ್ರು.
ಭತ್ತದ ಕೃಷಿಯನ್ನು ಆರಂಭ ಮಾಡುವುದು ಮುಖ್ಯವಲ್ಲ. ಅತ್ಯಂತ ಶ್ರದ್ಧೆಯಿಂದ ಅದನ್ನು ನೋಡಿಕೊಳ್ಳುವುದು. ಭತ್ತದಿಂದ ಅಕ್ಕಿ ತಯಾರಿಸುವ ತನಕ ಅದರ ಹಿಂದೆ ಶ್ರಮ ಪಡುವುದು ಅತೀ ಅಗತ್ಯ. ಈ ಹಿನ್ನಲೆಯಲ್ಲಿ ಭಕ್ತಾಧಿಗಳು, ಪುತ್ತೂರು ದೇವಳ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೃಷಿ ಇಲಾಖೆಯನ್ನು ಜೋಡಿಸಿಕೊಂಡು ಭತ್ತ ಬೇಸಾಯ ನಡೆಸಲು ಚಿಂತನೆ ಮಾಡಲಾಗಿದೆ. ಇಲ್ಲಿ ಬೆಳೆಯುವ ಪೈರು ಹಾಗೂ ಭತ್ತದ ತೆನೆಗಳು ಜನತೆಯನ್ನು ಆಕರ್ಷಿಸುವ ರೀತಿಯಲ್ಲಿ ಬೆಳೆಯುವಂತೆ ಮಾಡುವ ಕೆಲಸ ನಡೆಯಬೇಕು. ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು ಪ್ರಾರ್ಥಿಸಿದ್ರು. ತೆಂಗಿನ ಕಾಯಿ ಒಡೆಯುವ ಮೂಲಕ ಯಾಂತ್ರೀಕೃತ ಉಳುಮೆಗೆ ಚಾಲನೆ ನೀಡಿದ ಶಾಸಕ ಅಶೋಕ್ ರೈ ಅವರು ನಂತರ ಟ್ರಾöಕ್ಟರ್ ಮೂಲಕ ಉಳುಮೆ ನಡೆಸಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…