ದಕ್ಷಿಣ ಭಾರತದ ಹೆಸರಾಂತ ನಾಗ ಕ್ಷೇತ್ರ ಕುಕ್ಕೆ ಸುಬ್ರಮಣ್ಯಕ್ಕೆ ಚಿತ್ರನಟ ರಾಕಿಂಗ್ ಸ್ಟಾರ್ ಯಶ್ ಭೇಟಿ ನೀಡಿದ್ದಾರೆ.

ಯಶ್ ಜೊತೆಗೆ ಪತ್ನಿ ರಾಧಿಕಾ ಪಂಡಿತ್ ಹಾಗೂ ಕುಟುಂಬ ಸಮೇತವಾಗಿ ಭೇಟಿ ನೀಡಿದ್ದು, ಯಶ್ ಅವರ ಮುಂದಿನ ಚಿತ್ರ ಶೂಟಿಂಗ್ ಆರಂಭವಾಗುವ ಮೊದಲು ಸುಬ್ರಮಣ್ಯ ದೇವರ ಆಶೀರ್ವಾದ ಪಡೆಯಲು ಕುಕ್ಕೆಗೆ ಬಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಸಂದರ್ಭದಲ್ಲಿ ಅಭಿಮಾನಿಗಳು ಸೆಲ್ಫಿ ತೆಗೆಯಲು ಮುಗಿಬಿದ್ದರು.



