ಜನ ಮನದ ನಾಡಿ ಮಿಡಿತ

Advertisement

ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಯೋರ್ವ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

ಸ್ಪಷ್ಟವಾದ ಕಾರಣವಿಲ್ಲದೆ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಯೋರ್ವ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಗಸ್ಟ್ 7 ರಂದು ಬುಧವಾರ ರಾತ್ರಿ ವೇಳೆನಡೆದಿದೆ.

ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ ( 15) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಬಡಕಬೈಲು ಸೈಂಟ್ ಡೊಮೊನಿಕ್ ಆಂಗ್ಲ ಮಾಧ್ಯಮ ಶಾಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯಾಗಿದ್ದ ಈತ ಕಲಿಕೆ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬುದನ್ನು ಮನೆಯವರು ತಿಳಿಸಿದ್ದಾರೆ.
ರಾತ್ರಿ ಸುಮಾರು 7.30 ಗಂಟೆಗೆ ಸ್ನಾನ ಮಾಡಲೆಂದು ಬಚ್ಚಲು ಕೋಣೆಗೆ ತೆರಳಿದ ಮಗ 8 ಗಂಟೆಯಾದರೂ ವಾಪಸು ಬರದ್ದನ್ನು ಕಂಡ ತಾಯಿ ಬಾಗಿಲು ಬಡಿದರೂ ಬಾಗಿಲು ತೆಗೆಯದ ಹಿನ್ನೆಲೆಯಲ್ಲಿ ಬಾಗಿಲು ಮುರಿದು ಒಳಗೆ ನುಗ್ಗಿದಾಗ ಈತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡಿದೆ.
ಕೂಡಲೇ ಬಾಲಕನನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದ ಪರೀಕ್ಷೆ ನಡೆಸಿದಾಗ ಆತ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದರು.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!