ಮಂಗಳೂರು: ಪ್ರೀತಿ, ಪ್ರೇಮಕ್ಕೆ ದೇಶ, ಭಾಷೆ, ಜಾತಿ ಅಡ್ಡಿ ಅಲ್ಲ ಎಂಬುದಕ್ಕೆ ಮತ್ತೊಂದು ನಿದರ್ಶನ ಮಂಗಳೂರಿನಲ್ಲಿ ದೊರೆತಿದೆ. ಮಂಗಳೂರಿನ ಯುವಕ ಹಾಗೂ ಬ್ರೆಝಿಲ್ ಮೂಲದ ಯುವತಿಯ ಮದುವೆಯು ಆ.೯ರಂದು ನಗರದ ಟಿ. ವಿ. ರಮಣ ಪೈ ಸಭಾಂಗಣದಲ್ಲಿ ನಡೆದಿದೆ.
ಸುದೀರ್ಘ ಕಾಲದ ಪ್ರೀತಿಯ ಬಳಿಕ ಇವರು ಕರಾವಳಿ ನೆಲದಲ್ಲಿ ತುಳುನಾಡಿನ ಸಂಪ್ರದಾಯ ಪ್ರಕಾರವೇ ಮದುವೆಯಾಗಿ ಹೊಸ ಜೀವನ ಆರಂಭಿಸಿದ್ದಾರೆ.
ಬ್ರೆಝಿಲ್ ದೇಶದ ತಾಟಿಯಾನೆ ಹಾಗೂ ಮಂಗಳೂರಿನ ಜಿಎಸ್ ಬಿ ಸಮುದಾಯದ ಯುವಕ ಆದಿತ್ಯ ಅವರ ವಿವಾಹ ಸಮಾರಂಭ ಜಿಎಸ್ಬಿ ಸಂಪ್ರದಾಯದಂತೆ ನೆರವೇರಿದೆ.
ನಗರದ ಕರಂಗಲ್ಪಾಡಿ ನಿವಾಸಿ ಆದಿತ್ಯ ಎಂಟು ವರ್ಷಗಳ ಹಿಂದೆ ಐಟಿ ಉದ್ಯೋಗಕ್ಕಾಗಿ ಬ್ರೆಝಿಲ್‌ಗೆ ತೆರಳಿದ್ದರು. ೨೦೧೯ರಲ್ಲಿ ಇವರಿಗೆ ಜೊತೆಗೆ ಉದ್ಯೋಗ ಮಾಡುತ್ತಿದ್ದ ಯುವತಿ ಪರಿಚಯವಾಗಿ ಬಳಿಕ ಸ್ನೇಹಕ್ಕೆ ತಿರುಗಿತ್ತು. ೨೦೨೩ರಲ್ಲಿ ಇವರು ತಮ್ಮ ಮನೆಯವರಿಗೆ ಪ್ರೀತಿ ಪ್ರೇಮದ ವಿಷಯ ತಿಳಿಸಿ ಮದುವೆಗೆ ಒಪ್ಪಿಗೆ ಪಡೆದಿದ್ದರು. ಆದಿತ್ಯ ಹಾಗೂ ತಾಟಿಯಾನೆ ಅವರ ಜೋಡಿ ತಮ್ಮ ಹೆತ್ತವರು ಹಾಗೂ ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ.
ಪಾಶ್ಚಾತ್ಯ ಸಂಸ್ಕೃತಿಯಲ್ಲಿ ಬೆಳೆದು ಬಂದ ಯುವತಿ ತನ್ನ ಕೈಗೆ ಮೆಹಂದಿ ಹಚ್ಚಿ ಹಣೆಗೆ ಬಿಂದಿಗೆ ಧರಿಸಿ, ತಲೆಗೆ ಹೂ ಮುಡಿದು, ಭಾರತೀಯ ಸಂಪ್ರದಾಯದಂತೆ ಆಭರಣಗಳನ್ನು ಧರಿಸಿ ಅಗ್ನಿ ಸಾಕ್ಷಿಯಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ವಧುವಿನ ತಂದೆ ಅಟೀಲಿಯೊ, ತಾಯಿ ಲೂಸಿಯ, ಸಹೋದರಿಯರಾದ ಥಾಯಿಸ್, ಥಾಲಿತ್ ಹಾಗೂ ವರನ ಪೋಷಕರು, ಕುಟುಂಬಸ್ಥರು ಭಾಗವಹಿಸಿದ್ದರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…