ಉಪ್ಪಿನಂಗಡಿ: ಕಾರಿನ ಮೇಲೆ ಕಂಟೈನರ್ ಲಾರಿಯೊಂದು ಮಗುಚಿ ಬಿದ್ದು ಅಪ್ಪಚ್ಚಿಯಾಗಿದ್ದು, ಪ್ರಯಾಣಿಕರು ಪವಾಡ ಸದೃಶವಾಗಿ ಪಾರಾದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಬರ್ಚಿನಹಳ್ಳದಲ್ಲಿ ಶನಿವಾರ ನಡೆದಿದೆ. ದಾವಣಗೆರೆ ಮೂಲದವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕಂಟೈನರ್ ಲಾರಿ ಮಗುಚಿ ಬಿದ್ದಿದೆ. ಪರಿಣಾಮ ಕಾರು ಸಂಪೂರ್ಣ ಅಪ್ಪಚ್ಚಿಯಾಗಿದೆ. ಆದರೆ ಈ ವೇಳೆ ಕಾರಿನಲ್ಲಿ ಯಾರೂ ಇರಲಿಲ್ಲ. ಹೀಗಾಗೀ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಮಹಿಳೆಗೆ ವಾಂತಿ ಬಂದಿದೆ. ಹೀಗಾಗಿ ಕಾರಿನಲ್ಲಿದ್ದ ಎಲ್ಲರೂ ಕೆಳಗಿಳಿದಿದ್ದರು. ಆದ್ದರಿಂದ ಈ ವಾಂತಿ ಸಮಸ್ಯೆಯು ಐವರ ಪ್ರಾಣ ಉಳಿಸಿದೆ. ಇನ್ನು ಶುಕ್ರವಾರ ಧರ್ಮಸ್ಥಳ ಕ್ಷೇತ್ರಕ್ಕೆ ಬಂದು ಶನಿವಾರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ದರ್ಶನ ಮಾಡಿ ಊರಿಗೆ ಹಿಂದಿರುಗುವ ವೇಳೆ ಈ ಅವಘಡ ಸಂಭವಿಸಿದೆ.



