ಕರಾವಳಿ

ಮಂಗಳೂರು: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಕೊಲೆ

ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ವಿ.ಕೆ. ಫರ್ನಿಚರ್ ಕಟ್ಟಡದ ಹಿಂಭಾಗದಲ್ಲಿ ಭಾನುವಾರ ತಡರಾತ್ರಿ ವೇಳೆ ನಡೆದಿದೆ.

ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದಾತ. ರಾತ್ರಿ 10ರ ಸುಮಾರಿಗೆ ತಾಯಿ ಜೊತೆಗೆ ಕಲ್ಲಾಪುವಿನ ರೆಸ್ಟೋರೆಂಟ್​ ಒಂದಕ್ಕೆ ಊಟಕ್ಕೆಂದು ಬಂದ ಸಂದರ್ಭ ಹಿಂಬದಿಯಿಂದ ಕಾರಿನಲ್ಲಿ ಹಿಂಬಾಲಿಸಿದ್ದ ತಂಡ ಸಮೀರ್ ಇಳಿಯುತ್ತಿದ್ದಂತೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದೆ.

ಅಪಾಯವನ್ನು ಅರಿತ ಸಮೀರ್​ ತಕ್ಷಣ ಸ್ಥಳದಿಂದ ಓಡಲು ಯತ್ನಿಸಿದ್ದಾನೆ. ಈ ವೇಳೆ ಅಟ್ಟಾಡಿಸಿದ ಐದು ಮಂದಿಯ ತಂಡ ಕಲ್ಲಾಪು ಜಂಕ್ಷನ್​ನಿಂದ 500 ಮೀಟರ್​ ದೂರದಲ್ಲಿರುವ ವಿ.ಕೆ. ಫರ್ನಿಚರ್​ ಹಿಂಭಾಗದವರೆಗೂ ಅಟ್ಟಾಡಿಸಿ, ಅಲ್ಲಿ ತಲವಾರಿನಿಂದ ಕೊಚ್ಚಿ ಹತ್ಯೆ ಮಾಡಿದೆ. 2018 ರಲ್ಲಿ ರೌಡಿಶೀಟರ್ ಟಾರ್ಗೆಟ್​ ಇಲ್ಯಾಸ್​ನನ್ನು ಜೆಪ್ಪುವಿನ ಫ್ಲಾಟ್‍ವೊಂದರಲ್ಲಿ ದಾವುದ್, ಸಮೀರ್, ರಿಯಾಝ್, ನಮೀರ್​, ಅಬ್ದುಲ್ ಖಾದರ್, ಉಮ್ಮರ್ ನವಾಫ್, ಮೊಹಮ್ಮದ್ ನಝೀರ್, ನೌಷಾದ್, ಅಝ್ಗರ್​ ಆಲಿ ಎಂಬವರು ಸೇರಿಕೊಂಡು ಕೊಲೆ ಮಾಡಿದ್ದರು.

ಪ್ರಕರಣದಲ್ಲಿ ಸಮೀರ್ ಎರಡನೇ ಆರೋಪಿಯಾಗಿದ್ದು, ದಾವುದ್​ ಮತ್ತು ಸಮೀರ್ ಇಬ್ಬರು ನೇರವಾಗಿ ಫ್ಲ್ಯಾಟ್ ಪ್ರವೇಶಿಸಿ ಇಲ್ಯಾಸ್​ನನ್ನು ಹತ್ಯೆ ಮಾಡಿರುವುದು ತನಿಖೆಯಲ್ಲಿ ಬಯಲಾಗಿತ್ತು. ಪ್ರಕರಣ ಸಂಬಂಧ ಜೈಲುಪಾಲಾದ ಸಮೀರ್ ಕೆಲ ದಿನಗಳ ಹಿಂದಷ್ಟೇ ಬಿಡುಗಡೆಗೊಂಡಿದ್ದ.

ಕೊಲೆಯಾದ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಉಳ್ಳಾಲ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…

1 hour ago

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

 ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…

1 hour ago

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…

1 hour ago

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಸಾಮಾನ್ಯವಾಗಿ 18ನೇ ವಯಸ್ಸಿನಲ್ಲಿ ಯುವಕರು ಕಾಲೇಜು ಶಿಕ್ಷಣವನ್ನು ಆರಂಭಿಸುತ್ತಾರೆ. ಆದರೆ ಅಮೆರಿಕದ ಫ್ಲೋರಿಡಾ ಮೂಲದ ನಾಥನ್ ಥಾಮಸ್ ಇದೇ ವಯಸ್ಸಿನಲ್ಲಿ…

1 hour ago

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…

1 day ago

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

ಬೆಂಗಳೂರಿನಲ್ಲಿ 'ಸೇಫ್ ಫುಟ್‌ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್‌ಗೂ ಹೆಚ್ಚು ಪಾದಚಾರಿ ಮಾರ್ಗಗಳ…

1 day ago