ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ‌ತಾಲೂಕು‌ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 78 ನೇ ಸ್ವಾತಂತ್ರೋತ್ಸವ ಆಚರಣೆ

ಬಂಟ್ವಾಳ ‌ತಾಲೂಕು‌ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಂಟ್ವಾಳ ಆಡಳಿತ ಸೌಧದಲ್ಲಿ 78 ನೇ ಸ್ವಾತಂತ್ರೋತ್ಸವ ಆಚರಣೆ ನಡೆಯಿತು.
ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ಅವರು ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು ಮಾತನಾಡಿ, ಭಾರತ ದೇಶದ ಭವಿಷ್ಯ ಮತ್ತು ಮುಂದಿನ ಜನಾಂಗಕ್ಕೆ ನಿರ್ಭೀತವಾದ ಜೀವನ ಮಾಡಲು ನಮ್ಮ ಹಿರಿಯರು ಸ್ವಾತಂತ್ರ್ಯ ವನ್ನು ತಂದು ಕೊಟ್ಟಿದ್ದಾರೆ. ಅವರ ತ್ಯಾಗ ಬಲಿದಾನದ ನೆನಪು ಸದಾ ನಮ್ಮ ಮುಂದಿನ ಪೀಳಿಗೆಗೆ ತಿಳಿಸುವ ‌ಕಾರ್ಯ ಆಗುವುದರ ಜೊತೆ, ದೇಶದ ಹಿತವನ್ನು ಕಾಪಾಡಲು ನಾವೆಲ್ಲರೂ ಒಂದಾಗಬೇಕು ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ
ತಾಲೂಕಿನಲ್ಲಿ ಉತ್ತಮ ಸೇವೆ ಸಲ್ಲಿಸಿದ ಅಧಿಕಾರಿಗಳನ್ಬು ಗುರುತಿಸಿದ ಕಾರ್ಯ ನಿಜಕ್ಕೂ ಶ್ಲಾಘನೀಯ ,ಮುಂದೆಯೂ ಇಂತಹ ಉತ್ತಮ‌ಕಾರ್ಯಗಳು ನಿರಂತರವಾಗಿ ನಡೆಯಲಿ ಎಂದು ಅವರು ಶುಭ ಹಾರೈಸಿದರು.
ಸಿದ್ದಕಟ್ಟೆ ಸರಕಾರಿ ಶಾಲಾ ವಿದ್ಯಾರ್ಥಿನಿ ಕು. ಲಿಖಿತ ಅವರು ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದರು.

 

ಪೋಲೀಸ್ ಇಲಾಖೆ, ಅಗ್ನಿಶಾಮಕ ದಳ, ಗೃಹರಕ್ಷಕದಳ, ಎನ್.ಸಿ‌.ಸಿ. ಹಾಗೂ ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಯಿತು.
ಅತ್ಯಧಿಕ ಅಂಕಗಳನ್ನು ಪಡೆದ ತಾಲೂಕಿನ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಪಾಕೃತಿಕ ವಿಕೋಪದ ಸಂದರ್ಭದಲ್ಲಿ ಅವಿರತ ಸೇವೆ ಸಲ್ಲಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ, ಮೆಸ್ಕಾಂ ಸಿಬ್ಬಂದಿಗಳಿಗೆ, ಅರಣ್ಯ ಇಲಾಖೆ, ಅಶಾ ಕಾರ್ಯಕರ್ತೆಯರು, ಬಿ.ಎಲ್.ಒ ಗಳಿಗೆ, ಬಂಟ್ವಾಳ ಪುರಸಭಾ ಇಲಾಖೆಯ ಪೌರ ಕಾರ್ಮಿಕರ ಸೇವೆಯನ್ನು ಗುರುತಿಸಿ ಸನ್ಮಾನಿಸಿದರು.
ವೇದಿಕೆಯಲ್ಲಿ ಬೂಡ ಅಧ್ಯಕ್ಷ ಬೇಬಿ ಕುಂದರ್, ತಾ.ಪಂ.ಇ.ಒ.ಸಚಿನ್, ತೋಟಗಾರಿಕೆ ಇಲಾಖೆ ಪ್ರದೀಪ್ ಡಿ.ಸೋಜ, ನಗರ ಪೋಲೀಸ್ ಠಾಣೆಯ ಇನ್ಸ್ ಪೆಕ್ಟರ್ ಆನಂತಪದ್ಮನಾಭ, ತಾಲೂಕು ಆರೋಗ್ಯಾಧಿಕಾರಿ ಅಶೋಕ್ ರೈ, ಬಿ.ಇ.ಒ.ಮಂಜುನಾಥನ್, ಸಿ.ಡಿ.ಪಿ.ಒ.ಮಮ್ತಾಜ್, ಪುರಸಭಾ ಸಿ.ಒ.ಲೀನಾಬ್ರಿಟ್ಟೋ, ಅರಣ್ಯ ಇಲಾಖೆಯ ಪ್ರಫುಲ್ ರೈ, ಎ.ಪಿ.ಎಂ.ಸಿ‌‌.ಕಾರ್ಯದರ್ಶಿ ಸಮಂತ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!