ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಂಟ್ವಾಳ ಆಡಳಿತ ಸೌಧದಲ್ಲಿ 78 ನೇ ಸ್ವಾತಂತ್ರೋತ್ಸವ ಆಚರಣೆ ನಡೆಯಿತು.
ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ಅವರು ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು ಮಾತನಾಡಿ, ಭಾರತ ದೇಶದ ಭವಿಷ್ಯ ಮತ್ತು ಮುಂದಿನ ಜನಾಂಗಕ್ಕೆ ನಿರ್ಭೀತವಾದ ಜೀವನ ಮಾಡಲು ನಮ್ಮ ಹಿರಿಯರು ಸ್ವಾತಂತ್ರ್ಯ ವನ್ನು ತಂದು ಕೊಟ್ಟಿದ್ದಾರೆ. ಅವರ ತ್ಯಾಗ ಬಲಿದಾನದ ನೆನಪು ಸದಾ ನಮ್ಮ ಮುಂದಿನ ಪೀಳಿಗೆಗೆ ತಿಳಿಸುವ ಕಾರ್ಯ ಆಗುವುದರ ಜೊತೆ, ದೇಶದ ಹಿತವನ್ನು ಕಾಪಾಡಲು ನಾವೆಲ್ಲರೂ ಒಂದಾಗಬೇಕು ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ
ತಾಲೂಕಿನಲ್ಲಿ ಉತ್ತಮ ಸೇವೆ ಸಲ್ಲಿಸಿದ ಅಧಿಕಾರಿಗಳನ್ಬು ಗುರುತಿಸಿದ ಕಾರ್ಯ ನಿಜಕ್ಕೂ ಶ್ಲಾಘನೀಯ ,ಮುಂದೆಯೂ ಇಂತಹ ಉತ್ತಮಕಾರ್ಯಗಳು ನಿರಂತರವಾಗಿ ನಡೆಯಲಿ ಎಂದು ಅವರು ಶುಭ ಹಾರೈಸಿದರು.
ಸಿದ್ದಕಟ್ಟೆ ಸರಕಾರಿ ಶಾಲಾ ವಿದ್ಯಾರ್ಥಿನಿ ಕು. ಲಿಖಿತ ಅವರು ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದರು.
ಪೋಲೀಸ್ ಇಲಾಖೆ, ಅಗ್ನಿಶಾಮಕ ದಳ, ಗೃಹರಕ್ಷಕದಳ, ಎನ್.ಸಿ.ಸಿ. ಹಾಗೂ ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಯಿತು.
ಅತ್ಯಧಿಕ ಅಂಕಗಳನ್ನು ಪಡೆದ ತಾಲೂಕಿನ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಪಾಕೃತಿಕ ವಿಕೋಪದ ಸಂದರ್ಭದಲ್ಲಿ ಅವಿರತ ಸೇವೆ ಸಲ್ಲಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ, ಮೆಸ್ಕಾಂ ಸಿಬ್ಬಂದಿಗಳಿಗೆ, ಅರಣ್ಯ ಇಲಾಖೆ, ಅಶಾ ಕಾರ್ಯಕರ್ತೆಯರು, ಬಿ.ಎಲ್.ಒ ಗಳಿಗೆ, ಬಂಟ್ವಾಳ ಪುರಸಭಾ ಇಲಾಖೆಯ ಪೌರ ಕಾರ್ಮಿಕರ ಸೇವೆಯನ್ನು ಗುರುತಿಸಿ ಸನ್ಮಾನಿಸಿದರು.
ವೇದಿಕೆಯಲ್ಲಿ ಬೂಡ ಅಧ್ಯಕ್ಷ ಬೇಬಿ ಕುಂದರ್, ತಾ.ಪಂ.ಇ.ಒ.ಸಚಿನ್, ತೋಟಗಾರಿಕೆ ಇಲಾಖೆ ಪ್ರದೀಪ್ ಡಿ.ಸೋಜ, ನಗರ ಪೋಲೀಸ್ ಠಾಣೆಯ ಇನ್ಸ್ ಪೆಕ್ಟರ್ ಆನಂತಪದ್ಮನಾಭ, ತಾಲೂಕು ಆರೋಗ್ಯಾಧಿಕಾರಿ ಅಶೋಕ್ ರೈ, ಬಿ.ಇ.ಒ.ಮಂಜುನಾಥನ್, ಸಿ.ಡಿ.ಪಿ.ಒ.ಮಮ್ತಾಜ್, ಪುರಸಭಾ ಸಿ.ಒ.ಲೀನಾಬ್ರಿಟ್ಟೋ, ಅರಣ್ಯ ಇಲಾಖೆಯ ಪ್ರಫುಲ್ ರೈ, ಎ.ಪಿ.ಎಂ.ಸಿ.ಕಾರ್ಯದರ್ಶಿ ಸಮಂತ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…