ಕರಾವಳಿ

ಆಗೋಸ್ಟ್ 23 ರಂದು “ಅನರ್ಕಲಿ” ತುಳು ಸಿನಿಮಾ ತೆರೆಗೆ

ಮಂಗಳೂರು: ಲಕುಮಿ ಸಿನಿ ಕ್ರಿಯೇಷನ್ ಮತ್ತು ಲೋ ಬಜೆಟ್ ಪ್ರೊಡಕ್ಷನ್ ನಿರ್ಮಾಣದಲ್ಲಿ ಹರ್ಷಿತ್ ಸೊಮೇಶ್ವರ ನಿರ್ದೇಶನದಲ್ಲಿ ತಯಾರಾದ “ಅನರ್ ಕಲಿ” ತುಳು ಸಿನಿಮಾದ ಪತ್ರಿಕಾಗೋಷ್ಠಿ ಸೋಮವಾರ ಸಂಜೆ ನಗರದಲ್ಲಿ ನಡೆಯಿತು.
ಮಾಧ್ಯಮವನ್ನುದ್ದೇಶಿಸಿ ಮಾತಾಡಿದ ಲಯನ್ ಕಿಶೋರ್ ಡಿ ಶೆಟ್ಟಿ ಅವರು, “ಅನರ್ಕಲಿ ಸಿನಿಮಾ ಈಗಾಗಲೇ ಪ್ರೀಮಿಯರ್ ಶೋ ಏರ್ಪಡಿಸಲಾಗಿದೆ. ಸಿನಿಮಾ ನೋಡಿದ ಪ್ರೇಕ್ಷಕರು ನಮ್ಮ ಪ್ರಯತ್ನವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸಿನಿಮಾ ಕುರಿತು ತುಳುನಾಡಿನಲ್ಲಿ ಒಳ್ಳೆಯ ಮಾತು ಕೇಳಿಬರುತ್ತಿದೆ. ಇದು ನಮ್ಮ ಚಿತ್ರತಂಡಕ್ಕೆ ಖುಷಿ ತಂದಿದೆ. ನಾಡಿದ್ದು ಆಗಸ್ಟ್ 23ರಂದು ಸಿನಿಮಾ ಬಿಡುಗಡೆಯಾಗಲಿದ್ದು ತುಳುವರು ಸಿನಿಮಾ ನೋಡಿ ನಮ್ಮನ್ನು ಗೆಲ್ಲಿಸಬೇಕು” ಎಂದರು.

 

 

 

ನಟ ಶೋಭರಾಜ್ ಪಾವೂರು ಮಾತನಾಡಿ, “ಇದೊಂದು ಪರಿಶುದ್ಧವಾದ ತುಳು ಸಿನಿಮಾ. ಈ ಸಿನಿಮಾ ಹಿಂದೆ ಬಂದಿಲ್ಲ ಹಾಗಿದೆ ಹೀಗಿದೆ ಎಂದು ಸುಮ್ಮನೆ ಹೇಳುವುದಿಲ್ಲ. ಆದರೆ ಈ ಸಿನಿಮಾ ನೋಡಿದ ಬಳಿಕ ಎರಡು ದಿನಗಳಾದರೂ ನಿಮ್ಮನ್ನು ಕಾಡುತ್ತದೆ. ನಿಮ್ಮ ಹಣಕ್ಕೆ ಖಂಡಿತಾ ಲಾಸ್ ಆಗುವುದಿಲ್ಲ“ ಎಂದರು.
ನಟಿ ಆರ್ ಜೆ ಮಧುರಾ ಮಾತನಾಡಿ, ”ಸಿನಿಮಾ ನೋಡಿದವರು ತುಂಬಾ ಚೆನ್ನಾಗಿದೆ ಎಂದು ಬೆನ್ನುತಟ್ಟಿದ್ದಾರೆ. ತುಳುವರು ಥಿಯೇಟರ್ ಗೆ ಬಂದು ಸಿನಿಮಾ ನೋಡಿದಲ್ಲಿ ನಾವು ಇನ್ನಷ್ಟು ಕಡಿಮೆ ಬಜೆಟ್ ನಲ್ಲಿ ಸಿನಿಮಾ ಮಾಡಲು ಸಾಧ್ಯ. ನಿಮ್ಮೆಲ್ಲರ ಆಶೀರ್ವಾದ ನಮಗೆ ಬೇಕು“ ಎಂದರು.
ನಿರ್ದೇಶಕ ಹರ್ಷಿತ್ ಸೋಮೇಶ್ವರ ಮಾತನಾಡಿ, ”ನೀವು ತಲೆ ಖಾಲಿ ಇಟ್ಟುಕೊಂಡು ಸಿನಿಮಾ ನೋಡಲು ಬನ್ನಿ. ಯಾಕೆಂದರೆ ಈ ಸಿನಿಮಾದಲ್ಲಿ 2 ಗಂಟೆ 10 ನಿಮಿಷಗಳ ಕಾಲ ನಿಮ್ಮನ್ನು ರಂಜಿಸಲು ಏನೆಲ್ಲಾ ಬೇಕೋ ಅದೆಲ್ಲವನ್ನು ತೋರಿಸಿದ್ದೇವೆ. ಹೀಗಾಗಿ ತುಳು ಭಾಷೆ ತುಳು ಸಿನಿಮಾವನ್ನು ಉಳಿಸಲು ಎಲ್ಲರೂ ಒಂದಾಗಿ ನಮ್ಮ ಸಿನಿಮಾ ನೋಡಿ ಬೆಂಬಲಿಸಿ“ ಎಂದು ಹೇಳಿದರು. ವೇದಿಕೆಯಲ್ಲಿ ಅರುಣ್ ರೈ ಪುತ್ತೂರು, ವಾತ್ಸಲ್ಯ, ಲಂಚುಲಾಲ್, ರಜನೀಶ್ ಕೋಟ್ಯಾನ್, ರೋಹಿತ್, ಮೋಹನ್ ಕೊಪ್ಪಲ ಮತ್ತಿತರರು ಉಪಸ್ಥಿತರಿದ್ದರು.

“ಅನರ್ ಕಲಿ” ಸಿನಿಮಾ ಒಂದೇ ಹಂತದಲ್ಲಿ 18 ದಿನಗಳ ಕಾಲ ಚಿತ್ರೀಕರಣ ನಡೆದಿತ್ತು. ಪೊಳಲಿ, ಕಟೀಲು, ಸೋಮೇಶ್ವರ, ಉಳ್ಳಾಲ, ಉಳಿಯ, ನೀರ್ ಮಾರ್ಗ, ಹಾಗೂ ಕಳಸದಲ್ಲಿ ಸಿನಿಮಾಕ್ಕೆ ಚಿತ್ರೀಕರಣ ನಡೆದಿದೆ.
ಮುಖ್ಯವಾಗಿ ಸಿನಿಮಾದಲ್ಲಿ ಒಂದು ಕಥಾಹಂದರವನ್ನು ಇಟ್ಟುಕೊಂಡು ಸಂಪೂರ್ಣ ಹಾಸ್ಯಭರಿತವಾಗಿ ಸಿನಿಮಾ ಸಾಗಿದೆ. ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ದೀಪಕ್ ಪಾಣಾಜೆ, ರವಿ ರಾಮಕುಂಜ, ಪುಷ್ಪರಾಜ್ ಬೊಳ್ಳೂರು, ಸುಜಾತ ಶಕ್ತಿನಗರ, ನಮಿತಾ ಕುಳೂರು ಮುಖ್ಯ ಭೂಮಿಕೆಯಲ್ಲಿದ್ದಾರೆ. ನಾಯಕ ನಟನಾಗಿ ವಿಜಯ್ ಶೋಭರಾಜ್ ಪಾವೂರು, ನಾಯಕಿಯಾಗಿ ಮಧುರ ಆರ್ ಜೆ ಅಭಿನಯಿಸಿದ್ದಾರೆ. ಇನ್ನುಳಿದಂತೆ ಮೋಹನ್ ಕೊಪ್ಪಲ, ಹರ್ಷಿತ್ ಸೋಮೇಶ್ವರ, ಮಂಜು ರೈ ಮುಳೂರು, ರಂಜನ್ ಬೋಳೂರು ಶರಣ್ ಕೈಕಂಬ, ಪ್ರಕಾಶ್ ಶೆಟ್ಟಿ ಧರ್ಮನಗರ, ಮಧುರ ಆರ್.ಜೆ ವಾತ್ಸಲ್ಯ ಸಾಲಿಯಾನ್ , ವಿನಾಯಕ್ ಜೆಪ್ಪು ತಾರಾಗಣದಲ್ಲಿದ್ದಾರೆ.
ಛಾಯಾಗ್ರಹಣ ಅನಿಲ್ ಕುಮಾರ್, ಅರುಣ್ ರೈ ಪುತ್ತೂರು, ಸಹಾಯಕ ಛಾಯಾಗ್ರಹಣ ಚರಣ್ ಆಚಾರ್ಯ, ಪ್ರಜ್ವಲ್ ಸುವರ್ಣ, ಸಂಗೀತ ರೋಹಿತ್ ಪೂಜಾರಿ, ಕಾರ್ಯಕಾರಿ ನಿರ್ಮಾಪಕರು ಮಹೇಶ್ ಪುತ್ತೂರು, ವೀರ ಕೇಸರಿ, ನಿರ್ಮಾಣ ನಿರ್ವಹಣೆ ವಾತ್ಸಲ್ಯ ಸಾಲಿಯಾನ್, ವರ್ಣಾಲಂಕಾರ ಚೇತನ್ ಕಲ್ಲಡ್ಕ, ಸಹಾಯಕ ವರ್ಣಾಲಂಕಾರ ಸವ್ಯರಾಜ್ ಕಲ್ಲಡ್ಕ, ಚರಣ್ ರಾಜ್ ಪಚ್ಚಿನಡ್ಕ, ಕಲಾ ನಿರ್ದೇಶನ ಭರತ್ ತುಳುವ, ಸಹ ನಿರ್ದೇಶಕ
ವೀರಕೇಸರಿ, ಭರತ್ ತುಳುವ, ವಿವೇಕ್ ಶೆಟ್ಟಿ, ಸಹಾಯಕ ನಿರ್ದೇಶಕರು ಸುದೇಶ್ ಪೂಜಾರಿ, ಮೋಕ್ಷಿತ್ ಕನಕಮಜಲು ಪವಿತ್ರಪ್ರಭು, ಅಮಿತ್, ಕೀರ್ತನ್ ರೈ ಸುಳ್ಯ, ವಸ್ತ್ರ ವಿನ್ಯಾಸ ಸವಿತ ಶೇಖರ್ ವಿದ್ಯಾ ಉಚ್ಚಿಲ್, ನೃತ್ಯ ನಿರ್ದೇಶನ ಶಶಾಂಕ್ ಸುವರ್ಣ, ಸಾಹಿತ್ಯ ಸುದೇಶ್ ಪೂಜಾರಿ, ಹರ್ಷಿತ್ ಸೋಮೇಶ್ವರ, ಹಿನ್ನಲೆ ಗಾಯನ ನಕುಲ್ ಅಭಯಂಕರ್, ಅರ್ಫಾಜ್ ಉಳ್ಳಾಲ್, ಸತೀಶ್ ಪಟ್ಲ, ಸೃಜನ್ ಕುಮಾರ್ ತೋನ್ಸೆ, ರೋಹಿತ್ ಪೂಜಾರಿ, ವಾತ್ಸಲ್ಯ ಸಾಲಿಯಾನದ, ಸೌಜನ್ಯ. ಪ್ರಚಾರ ವಿನ್ಯಾಸ ಪವನ್ ಆಚಾರ್ಯ ಬೋಳೂರು, ರಚನೆ ಮತ್ತು ನಿರ್ದೇಶನ ಹರ್ಷಿತ್ ಸೋಮೇಶ್ವರ, ನಿರ್ಮಾಣ ಲಂಚುಲಾಲ್, ಲೋಬಜೆಟ್ ಪ್ರೊಡಕ್ಷನ್, ಸಹ ನಿರ್ಮಾಣ: ಕಿಶೋರ್ ಡಿ ಶೆಟ್ಟಿ, ರಜನೀಶ್ ಕೋಟ್ಯಾನ್.
“ಅನರ್ ಕಲಿ” ಸಿನಿಮಾ ಆಗೋಸ್ಟ್ 23 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರಿನ ಮಿನಿ ವಿಧಾನಸೌಧ ಎದುರು ಜಾತ್ಯತೀತ ಜನತಾದಳ ವತಿಯಿಂದ ಪ್ರತಿಭಟನಾ ಸಭೆ…!

ಮಂಗಳೂರು: ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲಿ ಉಂಟಾಗಿರುವ ಬೆಳವಣಿಗೆಗಳ ವಿರುದ್ಧ ಮಂಗಳೂರಿನ ಮಿನಿ ವಿಧಾನಸೌಧ ಎದುರು ಜಾತ್ಯತೀತ…

2 days ago

ಮಂಗಳೂರು: ನಿಟ್ಟೆ ವಿ.ವಿ. ಮಾಧ್ಯಮ ಸಮಾವೇಶ ಸಮಾರೋಪ…!

ನಿಟ್ಟೆ ವಿಶ್ವವಿದ್ಯಾನಿಲಯದ ನಿಟ್ಟೆ ಇನ್‌ಸ್ಟಿಟ್ಯೂಟ್‌ ಆಫ್ ಕಮ್ಯುನಿಕೇಷನ್ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಅಂತರರಾಷ್ಟ್ರೀಯ ಸಮಾವೇಶ 2026 ಬುಧವಾರ ಸಮಾಪನಗೊಂಡಿತು.…

3 days ago

ಉಡುಪಿ: ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಪ್ರವಾಸಿ ಬಸ್ ಢಿ*ಕ್ಕಿ….!

ಕಾಲೇಜು ಪ್ರವಾಸ ಹೊರಟಿದ್ದ ಬಸ್ಸೊಂದು ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಇಬ್ಬರು…

4 days ago

ಉಡುಪಿ: ತಾಯಿ-ಮಗಳ ಹತ್ಯೆ ಪ್ರಕರಣ; ಆರೋಪಿಗೆ ಜೀವಾವಧಿ ಶಿಕ್ಷೆ….!

2022ರಲ್ಲಿ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ತಾಯಿ-ಮಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಉಡುಪಿ…

4 days ago

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ನಡುವೆ ಅಪ*ಘಾತ…!

ಸುಳ್ಯ ತಾಲೂಕಿನ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆ.ಎಸ್.ಆರ್.ಟಿ.ಸಿ ಸುಳ್ಯ ಕೊಯನಾಡು ಸರ್ವಿಸ್ ಬಸ್ಸು…

4 days ago

ಹಾವೇರಿ: ನದಿಗೆ ಸ್ನಾನಕ್ಕೆ ಇಳಿಯುವ ಸಂದರ್ಭ ಕಾಲು ಜಾರಿ ವ್ಯಕ್ತಿ ಮೃತ್ಯು..!

ನದಿಯಲ್ಲಿ ಸ್ನಾನ ಮಾಡುಲು ತೆರಳಿದ್ದ ವ್ಯಕ್ತಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಹಾವೇರಿಯ ಕಿರಗೆರೆ ಗ್ರಾಮದ ಬಳಿ ಇರುವ…

4 days ago