ಕಿನ್ನಿಗೋಳಿ: ಪತ್ರಕರ್ತರಾಗಿ, ಬರಹಗಾರರಾಗಿ, ಜಾನಪದ ಸಂಶೋಧಕರಾಗಿ, ಯಕ್ಷಗಾನ ಕಲಾವಿದರಾಗಿ, ಸಾಹಿತ್ಯ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಕ್ರೀಯಾಶೀಲರಾಗಿ, ವಿಮರ್ಶಕರಾಗಿ ಹೆಸರು ಮಾಡಿರುವ
ಕೆ. ಎಲ್. ಕುಂಡಂತಾಯ ಅವರು ನಾಗಾರಧನೆ, ದೈವಾರಾಧನೆ, ಸಿರಿ ಆರಾಧನೆ ಅಲ್ಲದೆ ನೂರಾರು ದೇವಾಲಯಗಳ ಬಗ್ಗೆ ವಿಶೇಷ ಸಂಶೋಧನ ಬರಹಗಳನ್ನು ಪ್ರಕಟಿಸಿದವರು. ವಿರಾಟ್ ದರ್ಶನ, ಶ್ರೀ ದುರ್ಗಾದರ್ಶನ, ಕಟೀಲು ಶ್ರೀ ದುರ್ಗಾ ದರ್ಶನ, ಅಣಿ ಅರದಲ, ಭಾರ್ಗವರಾಮ, ಮೊದಲಾದ ಕೃತಿಗಳನ್ನು ಸಂಪಾದಿಸಿದವರು. ಯಕ್ಷಗಾನ, ಜಾನಪದ ಇವರ ಮೆಚ್ಚಿನ ಅಧ್ಯಯನ ಕ್ಷೇತ್ರ. ನಲವತ್ತಕ್ಕೂ ಹೆಚ್ಚು ಕೃತಿಗಳ ರಚಯಿತರು. ಇವರಿಗೆ ಈ ಬಾರಿಯ ಅನಂತ ಪ್ರಕಾಶ ಪುರಸ್ಕಾರವನ್ನು ನೀಡಿ ಗೌರವಿಸಲಾಗುವುದು. ಪುರಸ್ಕಾರವು ಕುಂಡಂತಾಯರ ಸಾಹಿತ್ಯ ಸಾಧನೆಗಳ ಕುರಿತಾದ ಪರಿಚಯ ಕೃತಿ ಹಾಗೂ ರೂ. ೧೦,೦೦೦ವನ್ನು ಒಳಗೊಂಡಿದ್ದು, ಸಪ್ಟಂಬರ್ ೧ರ ಭಾನುವಾರ ಕಿನ್ನಿಗೋಳಿ ನೇಕಾರ ಸೌಧದಲ್ಲಿ ನಡೆಯುವ ಸಮಾರಂಭದಲ್ಲಿ ಅನಂತಪ್ರಕಾಶ ಪತ್ರಿಕೆಯ ೨೯ನೇ ವರ್ಷಾಚರಣೆ ಸಂದರ್ಭದಲ್ಲಿ ನೀಡಲಾಗುವುದು ಎಂದು ಅನಂತ ಪ್ರಕಾಶ ಸಂಸ್ಥೆಯ ನಿರ್ದೇಶಕ ಕೊಡೆತ್ತೂರು ಸಚ್ಚಿದಾನಂದ ಉಡುಪ ತಿಳಿಸಿದ್ದಾರೆ.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…