ಜನ ಮನದ ನಾಡಿ ಮಿಡಿತ

Advertisement

ಪಡುಬಿದ್ರಿ – ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಗೇಟ್ ವಿರುದ್ಧ ಬೃಹತ್ ಪ್ರತಿಭಟನೆ

ಉಡುಪಿ: ಪಡುಬಿದ್ರಿ – ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಸಂಗ್ರಹಣಾ ಕೇಂದ್ರವನ್ನು ಶಾಶ್ವತವಾಗಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಕಂಚಿನಡ್ಕದಲ್ಲಿ  ಪ್ರತಿಭಟನೆ ನಡೆಸಲಾಯಿತು.

ಜಿಲ್ಲೆಯ ವಿವಿಧ ಸಂಘಟನೆಗಳು, ಕಾಪು, ಕಾರ್ಕಳ, ಉಡುಪಿ, ಮೂಲ್ಕಿ ತಾಲೂಕು ಮತ್ತು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳ ಮುಖಂಡರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸುತ್ತಲಿನ‌ 40 ಗ್ರಾಮಗಳ ಸಾರ್ವಜನಿಕರು ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸಭೆಯ ಬಳಿಕ ಕಂಚಿನಡ್ಕದಿಂದ ಪಡುಬಿದ್ರಿ ಜಂಕ್ಷನ್ ವರೆಗೆ ಜಾಥಾ ನಡೆಯಿತು. ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಈಗಾಗಲೇ ಲೋಕೋಪಯೋಗಿ ಇಲಾಖೆ ಸಚಿವರು ತಾತ್ಕಾಲಿಕ ರದ್ದು ಎಂಬ ಆದೇಶ ಹೊರಡಿಸಿದ್ದಾರೆ. ಆದರೆ ಈ ಆದೇಶ ಶಾಶ್ವತ ರದ್ದಾಗಬೇಕು. ರಾಜ್ಯಪತ್ರದಲ್ಲಿ ಇದನ್ನು ಆದೇಶ ಪತ್ರದಲ್ಲಿ ಪ್ರಕಟಿಸಬೇಕು. ಈ ಬಗ್ಗೆ ಸಚಿವರನ್ನು ಭೇಟಿ ಮಾಡಿ ಒತ್ತಾಯಿಸಲಾಗುವುದು ಎಂದರು.

ಹೋರಾಟ ಸಮಿತಿ ಅಧ್ಯಕ್ಷ ಸುಹಾಸ್ ಹೆಗ್ಡೆ ನಂದಳಿಕೆ ಮಾತನಾಡಿ, ನಮ್ಮ ಊರಿಗೆ ಬಂದಿರುವ ಟೋಲ್ ಗೇಟ್ ಎಂಬ ಕಂಟಕವನ್ನು ಒದ್ದೋಡಿಸುವ ಹೋರಾಟಕ್ಕೆ ಪಕ್ಷಾತೀತವಾಗಿ ಎಲ್ಲರೂ ಕೈ ಜೋಡಿಸಿರುವುದು ಹೋರಾಟಕ್ಕೆ ಬಲ ಬಂದಿದೆ. ಕಾರ್ಯಾದೇಶಕ್ಕೆ ತಾತ್ಕಾಲಿಕ ತಡೆ ಸ್ವಾಗತಾರ್ಹವೇ ಆಗಿದ್ದು, ಕಾರ್ಕಳ – ಪಡುಬಿದ್ರಿ ನಡುವಿನ ರಸ್ತೆಯಿಂದ ಸಂಪೂರ್ಣ ಎತ್ತಂಗಡಿಯಾಗುವವರೆಗೂ ಈ ಹೋರಾಟ ಮುಂದುವರಿಯಲಿದೆ. ರಾಜ್ಯ ಸರಕಾರ ಕೂಡಲೇ ಸಂಪೂರ್ಣ ರದ್ದುಪಡಿಸಿ ಆದೇಶ ಹೊರಡಿಸಲಿ ಎಂದು ಆಗ್ರಹಿಸಿದರು.ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಈ ಹೋರಾಟ ಇಲ್ಲಿಗೇ ಮುಗಿಯುವುದಿಲ್ಲ. ಕಾರ್ಕಳ – ಪಡುಬಿದ್ರಿ ರಸ್ತೆಯಲ್ಲಿ ಟೋಲ್ ರದ್ದು ಎಂದು ಗೆಜೆಟ್ ನೋಟಿಫಿಕೇಶನ್ ಹೊರಡಿಸುವವರೆಗೂ ಈ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು. ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶವಿಠಲದಾಸ ಸ್ವಾಮೀಜಿ ಮಾತನಾಡಿ, ಈ ಟೋಲ್ ಹೋರಾಟವು ಜನರನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿದೆ. ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯನ್ನು ಟೋಲ್ ಮುಕ್ತ ಜಿಲ್ಲೆಯನ್ನಾಗಿಸುವಲ್ಲಿ ನಾವೆಲ್ಲರೂ ಒಗ್ಗೂಡೋಣ ಎಂದು ಕರೆನೀಡಿದರು.

ಮುದರಂಗಡಿ ಚರ್ಚ್ ನ ಧರ್ಮಗುರು ಫೆಡ್ರಿಕ್ ಡಿ ಸೋಜ, ಉಡುಪಿ ಶಾಸಕ ಯಶಪಾಲ್ ಸುವರ್ಣ, ವಿಧಾನ‌ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಮಾಜಿ ಶಾಸಕರಾದ ಲಾಲಾಜಿ ಆರ್. ಮೆಂಡನ್, ಕೆ. ರಘುಪತಿ ಭಟ್, ಪ್ರಮುಖರಾದ ಯೋಗೀಶ್ ಶೆಟ್ಟಿ ಬಾಲಾಜಿ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ, ಅನ್ಸಾರ್ ಅಹಮದ್ ಮೊದಲಾದವರು ಮಾತನಾಡಿ ಹೋರಾಟಕ್ಕೆ ಬೆಂಬಲ ಸೂಚಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!