ಸವಣೂರು: ಬಸ್ ನಿಲ್ಲಿಸಿಲ್ಲವೆಂದು ಬಸ್ ಚಾಲಕನಿಗೆ ಕೆಎಸ್ಆರ್ ಟಿಸಿ ಸಿಬ್ಬಂದಿಯಿಂದಲೇ ಬಸ್ ಚಾಲಕನಿಗೆ ಹಲ್ಲೆ ನಡೆಸಿದ ಘಟನೆ ಕಡಬ ತಾಲೂಕಿನ ಸವಣೂರಿನಲ್ಲಿ ನಡೆದಿದೆ.
ಸವಣೂರು ಪೆಟ್ರೋಲ್ ಪಂಪ್ ಬಳಿಯಿರುವ ಬಸ್ ನಿಲ್ದಾಣದಲ್ಲಿ ನಿಂತಿದ್ದ ಕೆಎಸ್ ಆರ್ ಟಿಸಿ ಸಿಬ್ಬಂದಿಯೋರ್ವರು ಬಸ್ ನಿಲ್ದಾಣದ ಸಮೀಪವೇ ಬಸ್ಸು ನಿಲ್ಲಿಸಿಲ್ಲವೆಂದು ಆರೋಪಿಸಿ ಚಾಲಕ ಭರತ್ ಎಂಬವರಿಗೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಬಸ್ ಕೆಲವು ಮೀಟರ್ ದೂರದಲ್ಲಿ ನಿಲ್ಲಿಸಿದಾಗ ಬಸ್ ಗೆ ಹತ್ತಿದ ಸಿಬ್ಬಂದಿ ನಾರಾಯಣ ಅವರು ಚಾಲಕನಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಕೂಡಲೇ ಚಾಲಕ ಬಸ್ ನಿಲ್ಲಿಸಿ ಬಸ್ ನಿಂದ ಇಳಿದಿದ್ದಾರೆ.ಬಸ್ ನಲ್ಲಿದ್ದ ಸಹಪ್ರಯಾಣಿಕರು ಘಟನೆಯ ವಿಡಿಯೋ ಚಿತ್ರೀಕರಣ ಮಾಡಿದ್ದು, ನಾರಾಯಣ ಅವರು ಚಾಲಕನನ್ನು ಪ್ರಶ್ನಿಸುವುದು, ಪೊಲೀಸರಿಗೆ ದೂರು ನೀಡಲು ಮುಂದಾದ ಚಾಲಕ ದಾಖಲಾದ ಅಸ್ಪತ್ರೆಗೆ ಹಲ್ಲೆ ನಡೆಸಿದ ಎನ್ನಲಾದ ಸಿಬ್ಬಂದಿ ಹಾಗೂ ಇನ್ನೋರ್ವ ಸಿಬ್ಬಂದಿ ಮಾತುಕತೆ ನಡೆಸುವುದು, ಇದಕ್ಕೆ ಚಾಲಕನ ಸಂಬಂಧಿಕರು ಆಕ್ಷೇಪ ವ್ಯಕ್ತಪಡಿಸುತ್ತಿರುವ ಬಗ್ಗೆ ವಿಡಿಯೋದಲ್ಲಿ ರೆಕಾರ್ಡ್ ಆಗಿದೆ.ಹಲ್ಲೆಗೊಳಗಾದ ಚಾಲಕ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಬಸ್ ಚಾಲಕ ಬೆಳ್ಳಾರೆ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ಮುಂದುವರಿಸಿದ್ದಾರೆ. ಹಲ್ಲೆ ಖಂಡಿಸಿ ಬಸ್ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ಮಾಡಲು ಸಿಬ್ಬಂದಿಗಳು ನಿರ್ಧರಿಸಿದ್ದಾರೆ. ಬಳಿಕದ ಬೆಳವಣಿಗೆಯಲ್ಲಿ ಹಲ್ಲೆ ನಡೆಸಿದವರ ಮೇಲೆ ಅಧಿಕಾರಿಗಳು ಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…