ಮುಲ್ಕಿ: ಹಳೆಯಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕ ಗ್ರಂಥಾಲಯ ಮಳೆಗೆ ಸೋರುತ್ತಿದ್ದು ಅಪಾಯದ ಸ್ಥಿತಿಯಲ್ಲಿದೆ.
ಮಳೆಗೆ ಸೋರುವುದನ್ನು ತಪ್ಪಿಸಲು ಕಟ್ಟಡದ ಮೇಲ್ಭಾಗದಲ್ಲಿ ತಾತ್ಕಾಲಿಕವಾಗಿ ಟಾರ್ಪಾಲ್ ಅಳವಡಿಸಲಾಗಿದೆ.ಹಳೆಯಂಗಡಿ ಗ್ರಾಮ ಪಂಚಾಯತ್ ಪಕ್ಕದಲ್ಲೇ ಸಾರ್ವಜನಿಕ ಗ್ರಂಥಾಲಯವಿದ್ದರೂ ಇದುವರೆಗೂ ದುರಸ್ತಿಗೆ ಪಂಚಾಯತ್ ಆಡಳಿತ ಮುಂದಾಗಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕಟ್ಟಡದ ಒಳಭಾಗದ ಮೇಲ್ಭಾಗದಲ್ಲಿ ಹಳೆಯ ಕಾಲದ ಮರಗಳಿಗೆ ಗೆದ್ದಲು ಹಿಡಿದಿದ್ದು ಮತ್ತಷ್ಟು ಅಪಾಯಕಾರಿಯಾಗಿ ಪರಿಣಮಿಸಿದೆ. ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವಧಿಯಲ್ಲಿ ನೂತನ ಗ್ರಂಥಾಲಯ ನಿರ್ಮಾಣಕ್ಕೆ ಅನುದಾನ ಕ್ರೋಡೀಕರಿಸಿದ್ದರೂ ಸರಕಾರದ ಬದಲಾವಣೆಯಿಂದ ಕಾಮಗಾರಿಗಳಿಗೆ ತಡೆ ಉಂಟಾಗಿದೆ.ಗ್ರಂಥಾಲಯದ ಹಿಂಬಾಗದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಶೌಚ ಮಾಡುತ್ತಿದ್ದು ಗ್ರಂಥಾಲಯಕ್ಕೆ ಪುಸ್ತಕ ಓದಲು ಬರುವವರಿಗೆ ದುರ್ವಾಸನೆಯುಕ್ತ ವಾತಾವರಣ ಹಾಗೂ ರೋಗದ ಭೀತಿ ಎದುರಾಗಿದೆ.
ಕೂಡಲೇ ಹಳೆಯಂಗಡಿ ಗ್ರಾಮ ಪಂಚಾಯತ್ ಆಡಳಿತ ಅಪಾಯಕಾರಿ ಗ್ರಂಥಾಲಯದ ಕಟ್ಟಡವನ್ನು ತಾತ್ಕಾಲಿಕ ನೆಲೆಯಲ್ಲಿ ದುರಸ್ತಿಪಡಿಸಲು ಮುಂದಾಗಬೇಕು ಎಂದು ಸ್ಥಳೀಯ ನಾಗರಿಕರು ಆಗ್ರಹಿಸಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…