ಜನ ಮನದ ನಾಡಿ ಮಿಡಿತ

Advertisement

ಆಗಸ್ಟ್ 30ರಿಂದ ಸೆಪ್ಟೆಂಬರ್ 1ರ ವರೆಗೆ ನಡೆಯಲಿದೆ ಮಂಗಳೂರು ಕಬಡ್ಡಿ ಪ್ರೀಮಿಯರ್ ಲೀಗ್ ಪಂದ್ಯಾವಳಿ ; ಫುಡ್ ಫೆಸ್ಟ್, ವಿನೋದ ಮೇಳ ಆಯೋಜನೆ

 

ಮಂಗಳೂರು: ಶೆಫ್ ಟಾಕ್ ಮಂಗಳೂರು ಕಬ್ಬಡಿ ಪ್ರೀಮಿಯರ್ ಲೀಗ್ ಸೀಸನ್-2 ಆಗಸ್ಟ್ 30ರಿಂದ ಸೆಪ್ಟೆಂಬರ್ 1ರವರೆಗೆ ನಡೆಯಲಿದ್ದು ಆಗಸ್ಟ್ 30ರಂದು ಆಹಾರೋತ್ಸವದ ಉದ್ಘಾಟನೆ ನಡೆಯಲಿದೆ. ಕಾರ್ಯಕ್ರಮ ಆಯೋಜಕ ಸುದೇಶ್ ಭಂಡಾರಿ ತಿಳಿಸಿದರು.

ಮಂಗಳೂರಿನ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು ಆಗಸ್ಟ್ 30ರ ಆಹಾರೋತ್ಸವದ ಉದ್ಘಾಟನೆ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಉದ್ಘಾಟಿಸಲಿದ್ದು; ಆಗಸ್ಟ್ 31ರಂದು ಕಬಡ್ಡಿ ಪಂದ್ಯಾಟದ ಉದ್ಘಾಟನೆ ನಡೆಯಲಿದ್ದು ಇದನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್‌ ಉದ್ಘಾಟಿಸಲಿದ್ದಾರೆ. ಕಳೆದ ವರ್ಷ ನಡೆದ ಸೀಸನ್ 1 ಅತ್ಯಂತ ಯಶಸ್ವಿಯಾಗಿ ನಡೆದಿದ್ದು ಈ ವರ್ಷ ಗೌರವಾಧ್ಯಕ್ಷ ಪ್ರಕಾಶ್ ಕುಂಪಲ, ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದೇವೆ. ಕಬಡ್ಡಿ ಟೂರ್ನಮೆಂಟ್ ಜೊತೆಗೆ ಈ ಬಾರಿ ಆಹಾರೋತ್ಸವ ಮತ್ತು ವಿನೋದ ಮೇಳವನ್ನು ಕೂಡಾ ಆಯೋಜಿಸಿದ್ದೇವೆ. ಜೊತೆಗೆ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಡಾ. ಸದಾನಂದ ಶೆಟ್ಟಿ, ಕನ್ಯಾನ ಸದಾಶಿವ ಶೆಟ್ಟಿ ಹಾಗೂ ಸದಾಶಿವ ಉಳ್ಳಾಲ ಪಾಲ್ಗೊಳ್ಳಲಿದ್ದಾರೆ. ಬಹುಮಾನ ವಿತರಣೆಯನ್ನು “ಶೆಫ್ ಟಾಕ್ ಫುಡ್ & ಹಾಸ್ಪಿಟಾಲಿಟಿ ಸರ್ವಿಸಸ್”ನ ಮ್ಯಾನೇಜಿಂಗ್ ಡೈರೆಕ್ಟರ್ ಗೋವಿಂದ ಬಿ. ಪೂಜಾರಿ ಅವರು ನೆರವೇರಿಸಲಿದ್ದಾರೆ“ ಎಂದವರು ಹೇಳಿದರು.

 

 

ಈ ವೇಳೆ ವಿ ಆರ್ ಯುನೈಟೆಡ್ ಅಧ್ಯಕ್ಷ ಅಝ್ಫರ್ ರಜಾಕ್ ಮಾತನಾಡಿ ಟೂರ್ನಮೆಂಟ್‌ನಲ್ಲಿ 8 ತಂಡಗಳು ಭಾಗವಹಿಸುತ್ತಿವೆ. ಅಸ್ರಾ ಬ್ರಿಗೇಡ್ಸ್, ಲೈಫ್ ಲೈನ್ಸ್ ಫಾಲ್ಕನ್ಸ್, ಟೀಮ್ ಬಾವ, ಯು ಕುಂಜತ್ತೂರು, ಮಂಗಳೂರು ಯುನೈಟೆಡ್ ಕಬಡ್ಡಿ ಕ್ಲಬ್, ಪ್ರಕಾಶ್ ಕುಂಪಲ ವಾರಿಯರ್ಸ್, ಕರ್ನಾಟಕ ತುಳುವಾಸ್ ನೈಜೀರಿಯಾ, ಮತ್ತು ನ್ಯೂ ಸ್ಟಾರ್ ಮಂಗಳೂರು ಈ ತಂಡಗಳ ಆಟಗಾರರನ್ನು ಆಗಸ್ಟ್ 20ರಂದು ಖಾಸಗಿ ಹೋಟೆಲ್‌ನಲ್ಲಿ ನಡೆದ ಹರಾಜು ಮೂಲಕ ಆಯ್ಕೆ ಮಾಡಲಾಗಿತ್ತು, ಒಟ್ಟು 99 ಆಟಗಾರರು ಆಯ್ಕೆಯಾಗಿದ್ದಾರೆ. ಈ ವರ್ಷ ನಾವು 100+ ಆಹಾರ ಮಳಿಗೆಗಳನ್ನು ನಿರೀಕ್ಷಿಸುತ್ತಿದ್ದೇವೆ. ಅವು ವಿವಿಧ ರೀತಿಯ ರುಚಿಕರ ಆಹಾರಗಳನ್ನು ಒದಗಿಸುತ್ತವೆ ಎಂದವರು ಹೇಳಿದರು.

ಕಾರ್ಯಕ್ರಮದಲ್ಲಿ ಗೌರವ ಸಲಹೆಗಾರ ವಿಶ್ವಾಸ್ ದಾಸ್, ಮಾಜಿ ಶಾಸಕರು ಬಿಎ ಮೊಯಿದೀನ್ ಬಾವಾ, ಹರೀಶ್ ನಾಯಕ್, ಕರುಣಾಕರ್, ಹಮೀದ್ ಅಮ್ಮಿ, ದೀಪಕ್ ಪಿಲಾರ್, ವಿನೋದ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು‌.

 

 

 

 

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!