ಮಂಗಳೂರು: ಶೆಫ್ ಟಾಕ್ ಮಂಗಳೂರು ಕಬ್ಬಡಿ ಪ್ರೀಮಿಯರ್ ಲೀಗ್ ಸೀಸನ್-2 ಆಗಸ್ಟ್ 30ರಿಂದ ಸೆಪ್ಟೆಂಬರ್ 1ರವರೆಗೆ ನಡೆಯಲಿದ್ದು ಆಗಸ್ಟ್ 30ರಂದು ಆಹಾರೋತ್ಸವದ ಉದ್ಘಾಟನೆ ನಡೆಯಲಿದೆ. ಕಾರ್ಯಕ್ರಮ ಆಯೋಜಕ ಸುದೇಶ್ ಭಂಡಾರಿ ತಿಳಿಸಿದರು.
ಮಂಗಳೂರಿನ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು ಆಗಸ್ಟ್ 30ರ ಆಹಾರೋತ್ಸವದ ಉದ್ಘಾಟನೆ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಉದ್ಘಾಟಿಸಲಿದ್ದು; ಆಗಸ್ಟ್ 31ರಂದು ಕಬಡ್ಡಿ ಪಂದ್ಯಾಟದ ಉದ್ಘಾಟನೆ ನಡೆಯಲಿದ್ದು ಇದನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಉದ್ಘಾಟಿಸಲಿದ್ದಾರೆ. ಕಳೆದ ವರ್ಷ ನಡೆದ ಸೀಸನ್ 1 ಅತ್ಯಂತ ಯಶಸ್ವಿಯಾಗಿ ನಡೆದಿದ್ದು ಈ ವರ್ಷ ಗೌರವಾಧ್ಯಕ್ಷ ಪ್ರಕಾಶ್ ಕುಂಪಲ, ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದೇವೆ. ಕಬಡ್ಡಿ ಟೂರ್ನಮೆಂಟ್ ಜೊತೆಗೆ ಈ ಬಾರಿ ಆಹಾರೋತ್ಸವ ಮತ್ತು ವಿನೋದ ಮೇಳವನ್ನು ಕೂಡಾ ಆಯೋಜಿಸಿದ್ದೇವೆ. ಜೊತೆಗೆ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಡಾ. ಸದಾನಂದ ಶೆಟ್ಟಿ, ಕನ್ಯಾನ ಸದಾಶಿವ ಶೆಟ್ಟಿ ಹಾಗೂ ಸದಾಶಿವ ಉಳ್ಳಾಲ ಪಾಲ್ಗೊಳ್ಳಲಿದ್ದಾರೆ. ಬಹುಮಾನ ವಿತರಣೆಯನ್ನು “ಶೆಫ್ ಟಾಕ್ ಫುಡ್ & ಹಾಸ್ಪಿಟಾಲಿಟಿ ಸರ್ವಿಸಸ್”ನ ಮ್ಯಾನೇಜಿಂಗ್ ಡೈರೆಕ್ಟರ್ ಗೋವಿಂದ ಬಿ. ಪೂಜಾರಿ ಅವರು ನೆರವೇರಿಸಲಿದ್ದಾರೆ“ ಎಂದವರು ಹೇಳಿದರು.
ಈ ವೇಳೆ ವಿ ಆರ್ ಯುನೈಟೆಡ್ ಅಧ್ಯಕ್ಷ ಅಝ್ಫರ್ ರಜಾಕ್ ಮಾತನಾಡಿ ಟೂರ್ನಮೆಂಟ್‌ನಲ್ಲಿ 8 ತಂಡಗಳು ಭಾಗವಹಿಸುತ್ತಿವೆ. ಅಸ್ರಾ ಬ್ರಿಗೇಡ್ಸ್, ಲೈಫ್ ಲೈನ್ಸ್ ಫಾಲ್ಕನ್ಸ್, ಟೀಮ್ ಬಾವ, ಯು ಕುಂಜತ್ತೂರು, ಮಂಗಳೂರು ಯುನೈಟೆಡ್ ಕಬಡ್ಡಿ ಕ್ಲಬ್, ಪ್ರಕಾಶ್ ಕುಂಪಲ ವಾರಿಯರ್ಸ್, ಕರ್ನಾಟಕ ತುಳುವಾಸ್ ನೈಜೀರಿಯಾ, ಮತ್ತು ನ್ಯೂ ಸ್ಟಾರ್ ಮಂಗಳೂರು ಈ ತಂಡಗಳ ಆಟಗಾರರನ್ನು ಆಗಸ್ಟ್ 20ರಂದು ಖಾಸಗಿ ಹೋಟೆಲ್‌ನಲ್ಲಿ ನಡೆದ ಹರಾಜು ಮೂಲಕ ಆಯ್ಕೆ ಮಾಡಲಾಗಿತ್ತು, ಒಟ್ಟು 99 ಆಟಗಾರರು ಆಯ್ಕೆಯಾಗಿದ್ದಾರೆ. ಈ ವರ್ಷ ನಾವು 100+ ಆಹಾರ ಮಳಿಗೆಗಳನ್ನು ನಿರೀಕ್ಷಿಸುತ್ತಿದ್ದೇವೆ. ಅವು ವಿವಿಧ ರೀತಿಯ ರುಚಿಕರ ಆಹಾರಗಳನ್ನು ಒದಗಿಸುತ್ತವೆ ಎಂದವರು ಹೇಳಿದರು.
ಕಾರ್ಯಕ್ರಮದಲ್ಲಿ ಗೌರವ ಸಲಹೆಗಾರ ವಿಶ್ವಾಸ್ ದಾಸ್, ಮಾಜಿ ಶಾಸಕರು ಬಿಎ ಮೊಯಿದೀನ್ ಬಾವಾ, ಹರೀಶ್ ನಾಯಕ್, ಕರುಣಾಕರ್, ಹಮೀದ್ ಅಮ್ಮಿ, ದೀಪಕ್ ಪಿಲಾರ್, ವಿನೋದ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…