ಜನ ಮನದ ನಾಡಿ ಮಿಡಿತ

Advertisement

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ:2022 ಮತ್ತು 2023ನೇ ಸಾಲಿನ ಗೌರವ ಪ್ರಶಸ್ತಿ ಘೋಷಣೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಕೊಡಮಾಡುವ 2022 ಮತ್ತು 2023ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ಆರು ಮಂದಿ ಸಾಧಕರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಪೂರ್ಣಗೊಂಡಿದೆ. 2022ನೇ ಸಾಲಿನಲ್ಲಿ ಹಂಝತುಲ್ಲಾಹ್‌ ಕುವೇಂಡ ಬೆಂಗಳೂರು (ಬ್ಯಾರಿ ಭಾಷೆ ಮತ್ತು ಸಂಘಟನೆ), ಮರಿಯಮ್‌ ಇಸ್ಮಾಈಲ್‌ ಉಳ್ಳಾಲ (ಬ್ಯಾರಿ ಸಾಹಿತ್ಯ) ಮತ್ತು ಎಂ.ಜಿ. ಶಾಹುಲ್‌ ಹಮೀದ್‌ ಗುರುಪುರ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಹಾಗೂ 2023ನೇ ಸಾಲಿನಲ್ಲಿ ಟಿ.ಎ. ಆಲಿಯಬ್ಬ ಜೋಕಟ್ಟೆ (ಬ್ಯಾರಿ ಭಾಷೆ ಮತ್ತು ಸಂಘಟನೆ), ಅಶ್ರಫ್‌ ಅಪೋಲೊ ಕಲ್ಲಡ್ಕ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಮತ್ತು ಮುಹಮ್ಮದ್‌ ಶರೀಫ್‌ ನಿರ್ಮುಂಜೆ (ಬ್ಯಾರಿ ಸಾಹಿತ್ಯ) ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

 

ಅಕಾಡೆಮಿಯ ಮಾಜಿ ಅಧ್ಯಕ್ಷ ಮುಹಮ್ಮದ್‌ ಕರಂಬಾರು, ಮಾಜಿ ಸದಸ್ಯರಾದ ಅತ್ತೂರು ಚೆಯ್ಯಬ್ಬ, ಆಯಿಶಾ ಯು.ಕೆ. ಮತ್ತು ಹುಸೈನ್‌ ಕಾಟಿಪಳ್ಳ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿದ್ದು ಸಹಕರಿಸಿದ್ದಾರೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸ್ಥಾಯಿ ಸಮಿತಿ ಸಭೆ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಲಾಗಿದೆ.

ಪ್ರಶಸ್ತಿಯು ಐವತ್ತು ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕಗಳನ್ನೊಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭವು ಸೆ. 6ರಂದು ಸಂಜೆ 4.30ಕ್ಕೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ ಎಂದು ಅಕಾಡೆಮಿಯ ಅಧ್ಯಕ್ಷ ಉಮರ್‌ ಯು. ಹೆಚ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!