ಕುಕ್ಕೆಸುಬ್ರಹ್ಮಣ್ಯ :ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಪರ್ಕಿಸುವ ರಾಜ್ಯ ರಸ್ತೆ ಕುಮಾರಧಾರ ಸೇತುವೆ ಯಿಂದ ಕೈಕಂಬ ವರೆಗೆ ಅಲ್ಲಲ್ಲಿ ದೊಡ್ಡ ದೊಡ್ಡ ಹೊಂಡಗಳು ನಿರ್ಮಾಣವಾಗಿದ್ದು.
ಎಂತ ಪರಿಣತಿ ಪಡೆದ ಚಾಲಕನಿಗೂ ಈ ಹೊಂಡ ತಪ್ಪಿಸಲು ಸಾಧ್ಯವೇ ಇಲ್ಲ ಅಂತ ಹೊಂಡಗಳು ಸೃಷ್ಟಿಯಾಗಿದೆ.
ಬೆಂಗಳೂರು, ಧರ್ಮಸ್ಥಳ, ಉಪ್ಪಿನಂಗಡಿ ಕಡೆಯಿಂದ ಕುಕ್ಕೆಗೆ ಬರುವ ಭಕ್ತರು,ಸಾರ್ವಜನಿಕರು,ಇದೆ ರಸ್ತೆಯಲ್ಲಿ ತಮ್ಮ ವಾಹನಗಳನ್ನು ಹರಿಸಿ ಕೊಂಡೆ ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ.
ಅಧಿಕಾರಿಗಳು ಇದೆ ರಸ್ತೆಯಲ್ಲಿ ಸಂಚಾರಿಸುತ್ತಾರೆ,ಪಾಪ ಹೊಂಡ ಇದೆ ವಾಹನ ಸವಾರರಿಗೆ ತೊಂದರೆ ಆಗುತ್ತಿದೆ ಎಂದು ಅಧಿಕಾರಿಗಳ ಗಮನಕ್ಕೆ ಬಂದಿಲ್ಲ ಎಂದು.ವಾಹನ ಸವಾರರಾದ ಉದ್ಯಮಿ ಸೀತಾರಾಮ ಗೌಡ,ದಿನೇಶ್ ಗಾಂಗೆಯ,ಉಮೇಶ್ ಅವರು ಇಂದು ಟೇಪ್ ಹಿಡಿದು ಅಳತೆ ಮಾಡಿದರು.ಕುಮಾರಧಾರ ಸೇತುವೆ ಬಳಿ ಸುಮಾರು 12 ಫೀಟ್ ಅಗಲಕ್ಕೆ, ಮೂರು ಫೀಟ್ ಆಳದ ಹೋಂಡ ಪತ್ತೆಯಾಗಿದೆ.
ಇನ್ನು ಅಲ್ಲೇ ಸ್ವಲ್ಪ ಮುಂದೆ ಹೋದರೆ ಅದೇ ರೀತಿಯ ಇನ್ನೊಂದು ದೊಡ್ಡ ಕೊಂಡ ನಿರ್ಮಾಣ ಆಗಿದೆ.ಈ ಹೋಂಡ ತಪ್ಪಿಸುವ ಬರದಲ್ಲಿ ಬೈಕ್ ಸವಾರರು ಮಗುಚಿ ಬಿದ್ದು ಅಪಘಾತ ಸಂಭವಿಸುತ್ತಿದೆ.
ಇನ್ನು ನಾಲ್ಕು ಚಕ್ರದ ವಾಹನಗಳಂತೂ ಹೊಂಡ ತಪ್ಪಿಸಲು ರೋಂಗ್ ಸೈಡ್ ನಲ್ಲಿ ಪ್ರಯಾಣ ಮಾಡುತ್ತಾರೆ.
ದುರ್ಘಟನೆಗಳು ಸಂಭವಿಸುವ ಮೊದಲೇ ಅಧಿಕಾರಿಗಳು ಸಂಬಂಧಪಟ್ಟ ಇಲಾಖೆಯವರು ಆದಷ್ಟು ಬೇಗ ಈ ಹೊಂಡಗಳನ್ನು ಮುಚ್ಚಿ ರಾಜ್ಯ ಹೆದ್ದಾರಿಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಶ್ರೀ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ, ಈ ರಾಜ್ಯ ಹೆದ್ದಾರಿಯಲ್ಲಿ ಸುಳ್ಯ ಮಡಿಕೇರಿ ಭಾಗಕ್ಕೆ ಸಂಚರಿಸುವ ವಾಹನ ಸವಾರರಿಗೆ ಅನುಕೂಲ ಮಾಡಿಕೊಡಬೇಕಾಗಿ ನಮ್ಮ ಕಳಕಳಿಯ ವಿನಂತಿ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…