ಉಳ್ಳಾಲ: ಬಸ್ಸಿನಲ್ಲಿ ಕುಸಿದುಬಿದ್ದ ಮಹಿಳೆಯನ್ನು ಬಸ್ ಸಿಬ್ಬಂದಿ ನಾಟೆಕಲ್ ಕಣಚೂರು ಆಸ್ಪತ್ರೆಗೆ ಬಸ್ಸಿನಲ್ಲಿಯೇ ಕರೆತಂದು ಮಗದೊಮ್ಮೆ ಮಾನವೀಯತೆ ಮರೆದಿರುವ ಘಟನೆ ನಾಟೆಕಲ್ ಕಣಚೂರು ಆಸ್ಪತ್ರೆಯಲ್ಲಿ ನಡೆದಿದೆ.
ವಿಟ್ಲ ಕಡೆಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಮರ್ಸಿ ಟ್ರಾವೆಲ್ಸ್ ಬಸ್ಸಿನಲ್ಲಿ ಮುಡಿಪು ಟಿಕೆಟ್ ಪಡೆದುಕೊಂಡಿದ್ದ ಮಹಿಳೆ ಮುಡಿಪು ತಲುಪಿದರೂ ಇಳಿಯುವುದು ಕಾಣಲಿಲ್ಲ. ಇದರಿಂದ ನಿರ್ವಾಹಕ ಯಾಕೂಬ್ ಎಂಬವರು ಮಹಿಳೆ ಸಮೀಪ ತೆರಳಿದಾಗ ಸಹಪ್ರಯಾಣಿಕರೊಬ್ಬರು, ಆಕೆ ಅಸ್ವಸ್ಥಳಾಗಿ ಕುಸಿದುಬಿದ್ದರೆಂದು ತಿಳಿಸಿದ್ದಾರೆ.
ತಕ್ಷಣ ಕರ‍್ಯಪ್ರವೃತ್ತರಾದ ಚಾಲಕ ಸವಾದ್ , ನಿರ್ವಾಹಕ ಯಾಕೂಬ್ ೧೦ ಕಿ.ಮೀ ಉದ್ದಕ್ಕೆ ಬಸ್ಸನ್ನು ತಂದು ನಾಟೆಕಲ್ ಕಣಚೂರು ಆಸ್ಪತ್ರೆಯೊಳಕ್ಕೆ ಕೊಂಡೊಯ್ದು ತುರ್ತು ನಿಗಾ ಘಟಕದಲ್ಲಿ ದಾಖಲಿಸಿದ್ದಾರೆ. ಘಟನೆ ಕುರಿತ ವೀಡಿಯೋ ಕಣಚೂರು ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಮಹಿಳೆ ಆರೋಗ್ಯದಲ್ಲಿ ಚೇತರಿಕೆ ಕಂಡುಬAದಿರುವುದಾಗಿ ಬಸ್ ಸಿಬ್ಬಂದಿ ತಿಳಿಸಿದ್ದಾರೆ.ಮಂಗಳೂರು ನಗರದಲ್ಲಿ ಇದೇ ಮಾದರಿಯಲ್ಲಿ ಎರಡು ಘಟನೆಗಳು ಮಾನವೀಯತೆಗೆ ಸಾಕ್ಷಿಯಾಗಿದ್ದರೆ, ಉಡುಪಿಯಲ್ಲೂ ವಾರದ ಹಿಂದೆ ಇಂತಹದ್ದೇ ಘಟನೆ ನಡೆದಿದ್ದು, ಇದೀಗ ಮುಡಿಪು ಭಾಗದಲ್ಲಿ ಖಾಸಗಿ ಬಸ್ ಸಿಬ್ಬಂದಿ ನಡೆಸಿದ ಕಾರ್ಯ ಎಲ್ಲರ ಶ್ಲಾಘನೆಗೆ ಪಾತ್ರವಾಗಿದೆ.
ಖಾಸಗಿ ಬಸ್ಸಿನಲ್ಲಿ ಅಸ್ವಸ್ಥಗೊಂಡ ಮಹಿಳೆಯನ್ನು ನಾಟೆಕಲ್ ಕಣಚೂರು ಆಸ್ಪತ್ರೆಗೆ ಬಸ್ ಸಿಬ್ಬಂದಿ ದಾಖಲಿಸಿದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…