ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ತೆನೆ ಹಬ್ಬ ಆಚರಣೆ ಮಾಡಲಾಯಿತು, ಪ್ರತಿ ವರ್ಷವೂ ಗಣೇಶ ಚತುರ್ಥಿಯ ಎರಡು ದಿನದ ಮೊದಲು ಈ ಆಚರಣೆಯನ್ನು ನಡೆಸಲಾಗುವುದು. ಈ ದಿನವನ್ನು ಕುರಲ್ ಪರ್ಬ ಎಂದು ಕರೆಯಾಲಾಗುತ್ತದೆ. ಜತೆಗೆ ಇದನ್ನು ಪುರಲ್ದ ಕುರಲ್ ಎಂದು ಕರೆಯಲಾಗುತ್ತದೆ. ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯ ಮುಂದೆ ಈ ಕುರಲ್ನ್ನು ಇಟ್ಟು, ಇಡಿ ಊರಿಗೆ ಒಳ್ಳೆಯದನ್ನು ಮಾಡಿ, ಸುಖ ಸಂತೋಷವನ್ನು ನೀಡಿ. ಮಳೆ ಬೆಳೆ ಒಳ್ಳೆಯ ರೀತಿಯಲ್ಲಿ ಆಗಲಿ ಎಂದು ಪ್ರಾರ್ಥನೆ ಮಾಡಲಾಗುತ್ತದೆ.
ತೆನೆಯನ್ನು ದೇವಾಲಯದ ಧ್ವಜಸ್ತಂಬದ ಮುಂಭಾಗದಲ್ಲಿ ಪ್ರಾರ್ಥನೆ ಮಾಡಿ, ಪುರೋಹಿತರ ನೇತೃತ್ವದಲ್ಲಿ ತೆನೆಯನ್ನು ದೇವಾಲಯದ ಒಳಗೆ ತೆಗೆದುಕೊಂಡು ಹೋಗಿ ತಾಯಿ ಶ್ರೀ ರಾಜರಾಜೇಶ್ವರಿ ಮುಂದೆ ಇಟ್ಟು ಪೂಜೆ ಮಾಡಲಾಗುತ್ತದೆ. ವಿಶೇಷ ಪೂಜೆಗಳು ನಡೆದು ನಂತರ ಅದನ್ನು ಭಕ್ತರಿಗೆ ನೀಡಲಾಗುತ್ತದೆ. ಇದರ ಜತೆಗೆ Let’s ಸೀಮೆಯ ಭಕ್ತಾಧಿಗಳು ದೇವರಿಗೆಮಾಡಿದ ನೈವೇದ್ಯವನ್ನು ಮನೆಮನೆಗೆ ಕೊಂಡು ಪೊಳಲಿ ಭಾಗದ ಮನೆ ಮನೆಯಲ್ಲಿ ಪುದ್ದರ್ ಆಚರಣೆ ಮಾಡಲಾಗುತ್ತದೆ.
ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕ ಮಾಧವ ಭಟ್ ಪೊಳಲಿ, ಅನುವಂಶಿಕ ಮೊಕ್ತೇಸರರಾದ ಡಾ. ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ದೇವಾಲಯದ ಅರ್ಚಕ ನಾರಾಯಣ ಭಟ್, ರಾಮ್ ಭಟ್, ಪರಮೇಶ್ವರ ಭಟ್ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ಹಾಗೂ ಭಕ್ತರು ಮೊದಲಾದವರು ಭಾಗವಹಿಸಿದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…