ಕಾಸರಗೋಡು: ಟೂರಿಸ್ಟ್ ಬಸ್ ಒಂದು ಮಿನಿ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಪ್ರಯಾಣಿಕ ಮೃತಪಟ್ಟಿದ್ದಾನೆ. ಕಾಞಂಗಾಡ್ ಮೂಲದ ಪಟನ್ನಕ್ಕಾಡ್ ಮಯ್ಯತ್ ರಸ್ತೆಯ ನಾಣಿಕಡವ್ ವಳಪ್
ನಿವಾಸಿ ಅಹ್ಮದ್ ಸಾಬಿಕ್ (27) ಮೃತಪಟ್ಟ ಯುವಕ. ಕಣ್ಣೂರು-ತಲಶೇರಿ ರಾಷ್ಟ್ರೀಯ ಹೆದ್ದಾರಿಯ ತೊಟ್ಟಡದಲ್ಲಿ ಈ ಅಪಘಾತ ನಡೆದಿದೆ. ಮೃತ ಯುವಕ ಸಾಬಿಕ್ ಕೆಲದಿನಗಳ ಹಿಂದೆಯಷ್ಟೇ ಗಲ್ಫ್‌ನಿಂದ ಊರಿಗೆ ಬಂದಿದ್ದ ಎನ್ನಲಾಗಿದೆ.
ದಾರಿಮಧ್ಯದಲ್ಲಿ ನಿಯಂತ್ರಣ ತಪ್ಪಿದ ಬಸ್ ಹಿಂಬದಿ ಕಂಟೈನರ್ ಲಾರಿಯ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪರಿಣಾಮ ಲಾರಿ ಸಮೀಪದ ಅಂಗಡಿಗೆ ನುಗ್ಗಿದೆ. ಡಿಕ್ಕಿ ಹೊಡೆದ ಬಸ್ಸಿನ ಬದಿಯಲ್ಲಿ ಅಹ್ಮದ್ ಸಾಬಿಕ್ ಕುಳಿತಿದ್ದ. ಈ ವೇಳೆ ಬಸ್ ರಸ್ತೆಯಲ್ಲಿ ಮೂರು ಬಾರಿ ಪಲ್ಟಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇತ್ತೀಚಿಗಷ್ಟೇ ಗಲ್ಸ್‌ನಿಂದ ಬಂದಿದ್ದ ಸಾಬಿಕ್, ಕೊಟ್ಟಾಯಂನಲ್ಲಿರುವ ತನ್ನ ಸ್ನೇಹಿತನ ಸಂಬಂಧಿಕರಿಗೆ ಕಳುಹಿಸಿದ್ದ ವಸ್ತುಗಳನ್ನು ನೇರವಾಗಿ ನೀಡಲು ಹೋಗುತ್ತಿದ್ದನು ಎಂದು ಮೂಲಗಳು ತಿಳಿಸಿದೆ. ಈ ಅಪಘಾತದಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಎರಡೂ ವಾಹನಗಳ ಚಾಲಕರು ಸೇರಿ 24 ಮಂದಿ ಗಾಯಗೊಂಡಿದ್ದಾರೆ ಹಾಗೂ ವಾಹನಗಳು ಹಾನಿಗೊಳಗಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…