ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಟಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ಸೆ.7ರಿಂದ 9ರ ವರೆಗೆ ನಡೆಯುವ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಉದ್ಘಾಟನಾ ಸಮಾರಂಭ ಜರಗಿತು.
ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ 115 ವರ್ಷಗಳ ಭವ್ಯ ಇತಿಹಾಸ ಹೊಂದಿರುವ ಬಂಟರ ಮಾತೃ ಸಂಘದ ನೇತೃತ್ವದಲ್ಲಿ ಕಳೆದ 18 ವರ್ಷಗಳಿಂದ ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸುತ್ತಿರುವ ಇಲ್ಲಿನ ಗಣೇಶೋತ್ಸವ ಇನ್ನಷ್ಟು ಸಮಾಜಮುಖಿ ಕಾರ್ಯಗಳಿಗೆ ಪ್ರೇರಣೆ ನೀಡಿ ಎಲ್ಲರಿಗೂ ಶುಭ ತರಲಿ ಎಂದು ಹಾರೈಸಿದರು. ಬುದ್ಧಿವಂತರ ಜಿಲ್ಲೆ ಎಂದೇ ಖ್ಯಾತಿಯುಳ್ಳ ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಪ್ರಕೃತಿಗೆ ಹೆಚ್ಚಿನ ಮಹತ್ವ ನೀಡುವವರಾಗಿದ್ದು, ಗಣೇಶೋತ್ಸವದ ಸಂದರ್ಭದಲ್ಲಿ ತೆನೆ ವಿತರಣೆ ಮಾಡುವ ಮೂಲಕ ದೇವರ ಆರಾಧನೆ ಜೊತೆಗೆ ಪ್ರಕೃತಿಯೊಂದಿಗೆ ನಮ್ಮ ಬದುಕನ್ನು ಜೋಡಿಸಿಕೊಂಡಿರುವುದು ಪ್ರಶಂಸನೀಯವಾಗಿದೆ ಎಂದರು.ಸಾಂಕೇತಿಕ ತೆನೆ ವಿತರಿಸಿದ ಮೋಹನ್ ದೇವ ಆಳ್ವ ಅವರು ಮಾತನಾಡಿ, ಅಜಿತ್ ಕುಮಾರ್ ರೈ ಮಾಲಾಡಿ ಅವರ ನೇತೃತ್ವದಲ್ಲಿ ಆಯೋಜಿಸಲಾದ ಗಣೇಶೋತ್ಸವ ಯಶಸ್ವಿಯಾಗಲಿ ಎಂದು ಹಾರೈಸಿದರು. ಧ್ವಜಾರೋಹಣ ನೆರವೇರಿಸಿದ ಗ್ರೂಪ್ ಕ್ಯಾಪ್ಟನ್ ಪ್ರದೀಪ್ ಎಸ್. ಶೆಟ್ಟಿ ಅವರು ಸಂಘಟಕರನ್ನು ಅಭಿನಂದಿಸಿದರು.
ಅಶ್ವಿನಿ ಮಣಿ ಮುಲ್ಲೈ ಮುಗಿಲನ್, ಡಾ. ಶೈಲಜಾ ಮೋಹನ್ ದೇವ್ ಆಳ್ವ ಹಾಗೂ ಜಯಂತಿ ಮೆನನ್ ಮುಖ್ಯ ಅತಿಥಿಗಳಾಗಿದ್ದರು.
ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಶೆಟ್ಟಿ, ಕೋಶಾಧಿಕಾರಿ ಸಿ ಎ ರಾಮ ಮೋಹನ್ ರೈ, ಸಿದ್ಧಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಡಾ. ಆಶಾಜ್ಯೋತಿ ರೈ, ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಕೃಷ್ಣ ಪ್ರಸಾದ್ ರೈ, ಗಣೇಶೋತ್ಸವ ಸಮಿತಿಯ ಸಂಚಾಲಕರುಗಳಾದ ದಿವಾಕರ ಸಾಮಾನಿ ಚೇಳಾರ್ ಗುತ್ತು, ಅಶ್ವತ್ತಾಮ ಹೆಗ್ಡೆ, ಮನೀಶ್ ರೈ ಹಾಗೂ ಸಂತೋಷ್ ಶೆಟ್ಟಿ ಶೆಡ್ಡೆ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮೋಹನ್ ದೇವ ಆಳ್ವ ದಂಪತಿಗಳನ್ನು ಸನ್ಮಾನಿಸಲಾಯಿತು.
ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ. ಅಜಿತ್ ಕುಮಾರ್ ರೈ ಮಾಲಾಡಿ ಅವರು ಪ್ರಸ್ತಾವನೆಗೈದು ಸ್ವಾಗತಿಸಿದರು. ತಾಲೂಕು ಸಮಿತಿಯ ಸಂಚಾಲಕ ವಸಂತ ಶೆಟ್ಟಿ ವಂದಿಸಿದರು. ಸತೀಶ್ ಶೆಟ್ಟಿ ಕೊಡಿಯಾಲ್ ಬೈಲ್ ಹಾಗೂ ಕವಿತಾ ಪಕ್ಕಳ ಕಾರ್ಯಕ್ರಮ ನಿರೂಪಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…