ಮಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ನಿವೃತ್ತ ಪತ್ರಕರ್ತ ಹಾಗೂ ಬೆಂಗಳೂರಿನ ಸೈಂಟ್ ಪೌಲ್ಸ್ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದ ಅಸಿಸ್ಟಂಟ್ ಪ್ರೊಫೆಸರ್ ಆಗಿದ್ದ ಪೌಲ್ಸ್ ಬೆಂಜಮಿನ್ ಅವರು ನಿಧನ ಹೊಂದಿದ್ದಾರೆ. ಮೈಸೂರು ಸಮೀಪದ ಕೊಳ್ಳೇಗಾಲ ನಿವಾಸಿಯಾಗಿದ್ದ ಅವರು ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜು ಮತ್ತು ಎಸ್‌ಡಿಎಂ ಕಾಲೇಜಿನ ಹಳೆ ವಿದ್ಯಾರ್ಥಿ. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿದ್ದು ಮಂಗಳೂರಿನ ನ್ಯೂಸ್ ವೆಬ್‌ಸೈಟ್ ಗಳಲ್ಲಿ ಮತ್ತು ಪತ್ರಿಕೆಯಲ್ಲಿ ಕೆಲವು ವರ್ಷ ಸೇವೆ ಸಲ್ಲಿಸಿದ್ದರು. ಬಳಿಕ ಹೊಸ ದಿಲ್ಲಿಗೆ ಹಾಗೂ ಇತ್ತೀಚೆಗೆ ಬೆಂಗಳೂರಿನ ಸೈಂಟ್ ಪಾವ್ಸ್ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರಾಗಿ ಸೇರ್ಪಡೆ ಗೊಂಡಿದ್ದರು. ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿ ಆಗದೆ ನಿಧನರಾಗಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…