ರಾಜ್ಯ

`Fact Vid’ ಫೇಸ್ಬುಕ್ ಪೇಜ್ ಮೂಲಕ ಹಿಂದೂ ದೇವತೆಗಳ ಅಪಮಾನ FIR ದಾಖಲು…!

ಮಂಗಳೂರು : ‘Fact Vid’ ಹೆಸರಿನ ಫೇಸ್ಬುಕ್ ಪೇಜ್ ಒಂದರಲ್ಲಿ ಅನೇಕ ದಿನಗಳಿಂದ AI (Artificial Intelligence) ತಾಂತ್ರಿಕ ಸಹಾಯದಿಂದ ಹಿಂದೂ ದೇವತೆಗಳ ಅಪಮಾನಾತ್ಮಕ ಮತ್ತು ಅಶ್ಲೀಲ ಫೋಟೋಗಳನ್ನು ನಿರಂತರವಾಗಿ ಫೇಸ್ಬುಕ್ ಜಾಲತಾಣದ ಮುಖಾಂತರ ಪ್ರಸಾರ ಮಾಡಲಾಗುತ್ತಿದೆ.

ಈ Al ಆಧಾರಿತ ಚಿತ್ರಗಳಿಂದ ಕೋಟ್ಯಂತರ ಹಿಂದೂ ಬಾಂಧವರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಸಂಬಂಧಿತ ಸೈಬರ್ ಕ್ರೈಮ್ ವಿಭಾಗವು ಇದರ ಬಗ್ಗೆ ಕೂಡಲೇ ಎಚ್ಚೆತ್ತುಕೊಂಡು ಪೇಜ್ ನ ಅಡ್ಮಿನ್ ಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿಯ ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯಕರಾದ ಶ್ರೀ. ವಿಜಯ ಕುಮಾರ ಇವರು ಆಗ್ರಹಿಸಿದ್ದಾರೆ. ಈ ಕುರಿತು 10 ಸೆಪ್ಟೆಂಬರ್ 2024 ಮಂಗಳವಾರದಂದು ಮಂಗಳೂರಿನ ಸೈಬರ್ ಕ್ರೈಮ್ ವಿಭಾಗಕ್ಕೆ ಸಮಿತಿಯ ಸಮನ್ವಯಕರು ಮತ್ತು ಧರ್ಮಪ್ರೇಮಿ ನ್ಯಾಯವಾದಿಗಳ ಒಕ್ಕೂಟವು ಸೇರಿ ದೂರು ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಉರ್ವ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಅಭಿವ್ಯಕ್ತಿ ಸ್ವಾತಂತ್ರ‍್ಯ ಎಂದು ತಮ್ಮ ಬಗ್ಗೆ ಬರೆದುಕೊಂಡ ‘Fact Vid’ ಫೇಸ್ಬುಕ್ ಪೇಜ್ ನಲ್ಲಿ ಪ್ರತಿದಿನ 7 ರಿಂದ 8 ಹಿಂದೂ ದೇವತೆಗಳ ಅಪಮಾನಾತ್ಮಕ ಮತ್ತು ಅಶ್ಲೀಲ ಫೋಟೋಗಳು ಪ್ರಸಾರವಾಗುತ್ತಿದ್ದು, ಇದರಲ್ಲಿ ಹಿಂದೂ ಧರ್ಮದ ಶ್ರದ್ಧಾಸ್ಥಾನ ಭಗವಾನ್ ಶಿವ, ಕೃಷ್ಣ, ರಾಮ, ಗಣೇಶ ಮೊದಲಾದ ದೇವತೆಗಳು ಸ್ತ್ರೀಯೊಂದಿಗೆ ಅಶ್ಲೀಲವಾಗಿ ವರ್ತಿಸುತ್ತಿರುವಂತೆ, ಓಡಿಸುತ್ತಿರುವಂತೆ, ಕುಸ್ತಿ ಆಡುತ್ತಿರುವಂತೆ ಹೀಗೆ ವಿವಿಧ ರೀತಿಯಲ್ಲಿ ಚಿತ್ರಿಸಲಾಗಿದೆ. ಈ ಪೋಸ್ಟ್ ಗಳಿಗೆ ಅನೇಕ ಮತಾಂಧರು ಧಾರ್ಮಿಕ ಭಾವನೆಗಳನ್ನು ನೋಯಿಸುವಂತೆ ಕಮೆಂಟ್ ಗಳನ್ನೂ ಹಂಚಿಕೊಳ್ಳುತ್ತಿದ್ದಾರೆ. ಈ ಮೂಲಕ ಹಿಂದೂಗಳನ್ನು ಕೆರಳಿಸುವ ಬಹುದೊಡ್ಡ ಷಡ್ಯಂತ್ರ ಇದರಲ್ಲಿ ಅಡಗಿದೆ.

ಈ ದೂರಿನಲ್ಲಿ ನ್ಯಾಯವಾದಿ ತೀರ್ಥೇಶ್ ಇವರು, ಫೇಸ್ಬುಕ್ ಪೇಜ್ ‘Fact Vid’ ನನ್ನು ನಿಯಂತ್ರಿಸುತ್ತಿರುವ ಅಡ್ಮಿನ್ ಮತ್ತು ಸದ್ರಿ ಪೇಜ್ ನಲ್ಲಿ ಹಿಂದೂ ದೇವತೆಗಳ ಅವಹೇಳನ ಮಾಡುವ ಕಮೆಂಟ್ ಗಳನ್ನೂ ಹಾಕುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 299, 192, 353 ಮತ್ತು 67 IT Act ಸೆಕ್ಷನ್ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು, ಧಾರ್ಮಿಕ ಭಾವನೆಗೆ ನೋವುಂಟು ಮಾಡಲು ಎಡೆಮಾಡಿಕೊಡುವ AI Tool ಗಳನ್ನು ನಿಯಂತ್ರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.

ಪೊಲೀಸ್ ನಿರೀಕ್ಷಕರಾದ ಭಾರತಿ ಇವರು ದೂರನ್ನು ಸ್ವೀಕರಿಸಿ ತಾವೆಲ್ಲರೂ ಸಮಾಜದ ಕಾಳಜಿ ವಹಿಸಿ ಇದನ್ನು ಜವಾಬ್ದಾರಿಯಿಂದ ವಿರೋಧಿಸುತ್ತಿರುವುದು ಅಭಿನಂದನಾರ್ಹವಾಗಿದೆ, ಇದರ ಬಗ್ಗೆ ಕೂಡಲೇ ಕ್ರಮಕೈಗೊಳ್ಳುತ್ತೇವೆ ಎಂದು ಪ್ರತಿಕ್ರಿಯಿಸಿದ್ದಾರೆ.

ಈ ವೇಳೆ ಧರ್ಮಾಭಿಮಾನಿ ವಕೀಲರಾದ ಈಶ್ವರ ಕೊಟ್ಟಾರಿ, ಯತೀಶ್, ವಿಜಯ ಕುಮಾರ್, ಸುಷ್ಮಾ, ಉದ್ಯಮಿಗಳಾದ ದಿನೇಶ್ ಎಂ. ಪಿ. ಚಂದ್ರಕಾಂತ್ ಕಾಮತ್, ಪ್ರಶಾಂತ್ ಕಾಂಚನ್, ಬಾಲಗಂಗಾಧರ, ನಾರಾಯಣ ಅಮೀನ್ ಇವರು ಮತ್ತು ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ವಿಜಯಕುಮಾರ ಇವರು ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…

19 hours ago

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…

19 hours ago

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…

20 hours ago

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…

20 hours ago

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…

20 hours ago

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…

6 days ago