ಜನ ಮನದ ನಾಡಿ ಮಿಡಿತ

Advertisement

ಸ್ಪೀಕರ್ ಖಾದರ್ ನೀಡಿದ “ಗಂಡಬೇರುಂಡ” ಪಿನ್ ಧರಿಸಿ ಅಮೇರಿಕಾ ತೆರಳಿದ ಡಿಸಿಎಂ ಡಿಕೆಶಿ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪತ್ನಿ ಸಮೇತ ಅಮೇರಿಕಾಕ್ಕೆ ಖಾಸಗಿ ಪ್ರವಾಸ ಕೈಗೊಂಡಿದ್ದಾರೆ. ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿ ಕೂಡಾ ಅಮೇರಿಕಾ ಪ್ರವಾಸದಲ್ಲಿದ್ದಾರೆ. ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಎಲ್ಲಾ ಶಾಸಕರಿಗೆ ಮೇಲ್ವಸ್ತ್ರದ ಮುಂಭಾಗ ಅಳವಡಿಸಲು ಸರಕಾರದ ಲಾಂಛನವಾದ “ಗಂಡಬೇರುಂಡ” ಪಿನ್ ನೀಡಿದ್ದರು. ಡಿಸಿಎಂ ಡಿಕೆಶಿ ಅವರು ಅಮೇರಿಕಾ ಭೇಟಿ ಸಂದರ್ಭ ಕೂಡಾ ಇದೇ ಪಿನ್ ಧರಿಸಿದ್ದರು. ಅಲ್ಲಿ ರಾಹುಲ್ ಗಾಂಧಿಯನ್ನು ಭೇಟಿಯಾದಾಗ ಡಿಕೆಶಿ ಕೋಟಿನಲ್ಲಿದ್ದ “ಗಂಡಬೇರುಂಡ” ಪಿನ್ ನ್ನು ಕುತೂಹಲದಿಂದ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಮೈಸೂರು ಒಡೆಯರ ರಾಜ್ಯ ನಿರ್ಮಾಣದೊಂದಿಗೆ “ಗಂಡಬೇರುಂಡ” ಲಾಂಛನವು ಜೊತೆಯಾಗಿ ಬಂದು, ಇಂದಿನ ಕರ್ನಾಟಕ ಸರ್ಕಾರದ ಲಾಂಛನವಾಗಿ ಕೂಡಾ ಮನ್ನಣೆ ಗಳಿಸಿದೆ. ಈ ಲಾಂಛನ ಈ ಬಾರಿಯ ವಿಧಾನಸಭೆಯಲ್ಲಿ ವಿಶೇಷ ಗೌರವಕ್ಕೆ ಪಾತ್ರವಾಗಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಕಾರಣಕರ್ತರು. ವಿಧಾನಸೌಧದಲ್ಲಿ ಅಮೂಲಾಗ್ರ ಬದಲಾವಣೆ ತಂದಿರುವ ಖಾದರ್, ವಿಧಾನಸೌಧದ ತುಂಬಾ ಗಂಡಬೇರುಂಡ ಆಕೃತಿಯ ಗಡಿಯಾರಗಳನ್ನು ಅಳವಡಿಸಿದ್ದಾರೆ. ರಾಜ್ಯದ ಎಲ್ಲಾ ಶಾಸಕರಿಗೆ ಸದನದಲ್ಲಿ ಧರಿಸಲು “ಗಂಡಬೇರುಂಡ” ಪಿನ್ ನೀಡಿದ್ದಾರೆ.

ಬಹುತೇಕ ಶಾಸಕರು ಈ ಪಿನ್ ನ್ನು ನಮ್ಮ ರಾಜ್ಯದ ಹೆಮ್ಮೆ ಎಂಬಂತೆ ಸಾರ್ವಜನಿಕ ರಂಗದಲ್ಲೂ ಅಳವಡಿಸಿ ಗೌರವ ನೀಡುತ್ತಿದ್ದಾರೆ. ಡಿಸಿಎಂ ಡಿಕೆಶಿ ಅವರು ಒಂದು ಹೆಜ್ಜೆ ಮುಂದೆ ಹೋಗಿ ವಿಶ್ವದ ದೊಡ್ಡಣ್ಣ ಅಮೇರಿಕಾದಲ್ಲೂ ಪ್ರದರ್ಶಿಸುತ್ತಿರುವುದು ಶ್ಲಾಘನೀಯ. ರಾಹುಲ್ ಗಾಂಧಿ ಕೂಡಾ ಈ ನಡೆಯನ್ನು ಸ್ವಾಗತಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!