ಕನ್ನಡ ಚಿತ್ರರಂಗದ ಜನಪ್ರಿಯ ನಟ ರಕ್ಷಿತ್ ಶೆಟ್ಟಿ ಕುಕ್ಕಿಕಟ್ಟೆಯ ಸಾರ್ವಜನಿಕ ಗಣೇಶೋತ್ಸವದಲ್ಲಿ ಭಾಗಿಯಾಗಿದ್ದಾರೆ. ಉಡುಪಿಯ ಕುಕ್ಕಿಕಟ್ಟೆ ನಿವಾಸಿಯಾಗಿರುವ ರಕ್ಷಿತ್ ಶೆಟ್ಟಿ ತಮ್ಮ ಮೂಲ ಗ್ರಾಮವಾಗಿರುವ ಅಲೆವೂರಿನ ಕಟ್ಟೆ ಗಣಪತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಪ್ರಾರ್ಥನೆ ಸಲ್ಲಿಸಿ ದೇವರ ಆಶೀರ್ವಾದ ಪಡೆದರು. ತವರೂರಿನ ಜನರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ರಕ್ಷಿತ್ ಶೆಟ್ಟಿ ಅಲೆವೂರು ಭಾಗದಲ್ಲಿ ನಡೆಯುವ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿರುತ್ತಾರೆ. ಕೆಲ ತಿಂಗಳ ಹಿಂದೆ ತಮ್ಮ ಮೂಲ ಮನೆಯ ದೈವದ ಆರಾಧನೆಯಲ್ಲೂ ಭಾಗವಹಿಸಿದ್ದರು. ಕಟ್ಟೆ ಗಣಪತಿ ಸನ್ನಿಧಾನ ಅಲೆವೂರು ಭಾಗದ ಪ್ರಸಿದ್ಧ ತಾಣವಾಗಿದ್ದು, ಕಳೆದ ಐದು ದಿನಗಳಿಂದ ಸಾರ್ವಜನಿಕ ಗಣೇಶೋತ್ಸವ ನಡೆಯುತ್ತಿದೆ. ಸ್ಥಳೀಯರು ಗಣೇಶೋತ್ಸವದಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆಯುತ್ತಾರೆ.




